ಬೆಂಗಳೂರು:-ಮೊಟ್ಟೆ ಎಸೆತದಿಂದ ತಲೆಗೆ ಗಾಯಗೊಂಡು ಆಸ್ಪತ್ರೆಗೆ ತೆರಳಿರುವ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ತಲೆಗೆ ಪೆಟ್ಟು ಬಿದ್ದಿರುವ ಹಿನ್ನೆಲೆಯಲ್ಲಿ 24 ಗಂಟೆ ಅಬ್ಸರ್ವೇಷನ್ನಲ್ಲಿರಬೇಕು ಅಂತ ವೈದ್ಯರು ಸಲಹೆ ನೀಡಿದ್ದರು. ಅದರಂತೆ ನಿನ್ನೆ ಚಿಕಿತ್ಸೆ ಪಡೆದು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಮೊಟ್ಟೆ ಏಟಿಗೆ ತಲೆಗೆ ಪೆಟ್ಟಾದ ಹಿನ್ನೆಲೆ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯಿಂದ ಮುನಿರತ್ನ ಡಿಸ್ಚಾರ್ಜ್ ಆಗಿದ್ದಾರೆ. ಮೊಟ್ಟೆ ಏಟಿನಿಂದ ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್ವೇಷನ್ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿಯನ್ನು ಆಸ್ಪತ್ರೆಯಲ್ಲಿ ಕಳೆದಿದ್ದ ಮುನಿರತ್ನ ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಈ ವೇಳೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೇ ಹಾಗೆ ತೆರಳಿದ್ದಾರೆ.