ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಧಿಕಾರ ಮುಡಾದ ಬಗ್ಗೆ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದು ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಾದ್ಯಮ ಪ್ರತಿಕ್ರಿಯೆ ನೀಡಿದ ಅವರು, ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅವ್ಯವಹಾರದ ವಿಚಾರ ನನ್ನ ಗಮನಕ್ಕೆ ಬಂದಿತ್ತು.
ಆಯುಕ್ತರು ಸಭೆ ಮಾಡದೆಯೇ ಸೈಟ್ಗಳನ್ನು ನೀಡಿದ್ದಾರೆ.
50:50 ಅನುಪಾತದಡಿ ನಿವೇಶನ ಕೊಡುವಾಗ ಸಭೆಯಲ್ಲಿ ಚರ್ಚೆಗೆ ತಂದು ಕೊಡಬೇಕು. ಆದ್ರೆ ಈ ನಿಯಮಗಳನ್ನು ಅಂದಿನ ಆಯುಕ್ತರು ಅನುಸರಿಸಿಲ್ಲ. ಹೀಗಾಗಿ ಅಂದಿನ ಆಯುಕ್ತರನ್ನ ಬದಲಾಯಿಸುವಂತೆ ಸರ್ಕಾರಕ್ಕೆ ಹೇಳಿದ್ದೆ. ಆದರೆ ಜಾತಿಯ ಪ್ರಭಾವದಿಂದ ಅವರು ಉಳಿದುಕೊಂಡರು. ಅವತ್ತಿನ ದಿನ ಸರಿಯಾದ ಕ್ರಮ ಆಗಿದ್ದರೇ ಇಂದು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿರಲಿಲ್ಲ, ಈಗಲಾದರೂ ಈ ಬಗ್ಗೆ ವ್ಯವಸ್ಥಿತವಾಗಿ ತನಿಖೆಯಾಗಲಿ ಎಂದು ಮನವಿ ಮಾಡಿದ್ದಾರೆ.