ಕಲಘಟಗಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ತೆರೆದ ವಾಹನದಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ಪಟ್ಟಣದ ಎಪಿಎಂಸಿ ಯಿಂದ ಆರಂಭವಾದ ರೋಡ್ ಶೋ ಬಮ್ಮಿಗಟ್ಟಿ ಕ್ರಾಸ್, ಆಂಜೆನೇಯ ವೃತ್ತ ಮೂಲಕ ಹುಬ್ಬಳ್ಳಿ ಕಾರವಾರ ರಾಷ್ಟ್ರಿಯ ಹೆದ್ದಾರಿಯಲ್ಲಿ ಸಾಗಿ ಯುವ ಶಕ್ತಿ ಸರ್ಕಲ್ ಅಂತ್ಯಗೊಂಡಿತು.
Video Player
00:00
00:40
ರೋಡ್ ಶೋ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಬಿಜೆಪಿ ದ್ವಜ ಪ್ರದರ್ಶಿಸಿ ಜೈ ಮೋದಿ, ಜೈ ಬಿಜೆಪಿ ಎಂಬ ಜಯ ಘೋಷಣೆಗಳು ಮೊಳಗಿದವು.
ನಂತರ ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಜನರ ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜ ಕುಂದಗೋಳಮಠ, ತಾಲ್ಲೂಕ ಅಧ್ಯಕ್ಷ ಬಸವರಾಜ ಶೇರೆವಾಡ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.