ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಮತ್ತೆ ಅಕ್ಕಿ ಹಗ್ಗ ಜಗ್ಗಾಟ ಮುಂದುವರಿದಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ವಿಪಕ್ಷ ಬಿಜೆಪಿ ಕೌಂಟರ್ ಕೊಡಲು ಮುಂದಾಗಿದ್ದು ರಾಜ್ಯ ಸರ್ಕಾರದ ಆರೋಪಕ್ಕೆ ಒಂದು ವಾರದ ಕ್ಯಾಂಪೇನ್ ಕೈಗತ್ತಿಕೊಂಡಿದೆ.
ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿರುವ ವಿಚಾರದ ಬಗ್ಗೆ ಮನೆ ಮನೆ ಸಂಪರ್ಕ ಅಭಿಯಾನ ಮಾಡುತ್ತಿದೆ. ಮನೆ ಮನೆಗೆ ಹೋಗಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿರುವ ಬಗ್ಗೆ ಹೇಳಲು ಬಿಜೆಪಿ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಇಂದಿನಿಂದ (ಜೂನ್ 28) ಈ ಅಭಿಯಾನ ಆರಂಭವಾಗಲಿದೆ.