ಕಲಬುರಗಿ: ರಾಜ್ಯದಲ್ಲಿ ಮತ್ತೋರ್ವ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಗೆ ಕಂಟಕ ಎದುರಾಗಿದೆ.
ಸಚಿವರ ಆಪ್ತ ರಾಜು ಕಪನೂರು ಅವರ ವಿರುದ್ಧ ಆರೋಪ ಮಾಡಿ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ವಿಚಾರವಾಗಿ ಬಿಜೆಪಿ ನಾಯಕರು ಪ್ರಿಯಾಂಕ್ ವಿರುದ್ಧ ಮುಗಿಬಿದ್ದಿದ್ದು, ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಇಂದು ಕಲಬುರಗಿಯ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ಮುತ್ತಿಗೆ, ಹಾಗೂ ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯವರು ನನ್ನ ಮನೆಗೆ ಮುತ್ತಿಗೆ ಹಾಕಲಿ.
. ನಾನೇ ಚಹಾ ಪಾನಿಯ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು. ಅದರಂತೆ ಪ್ರಿಯಾಂಕ್ ಖರ್ಗೆ ಅಭಿಮಾನಿಗಳು, ಅವರ ಮನೆ ಮುಂದೆ ರೆಡ್ ಕಾರ್ಪೆಟ್ ಹಾಸಿ ಟೀ, ಕಾಫಿ, ಎಳೆ ನೀರು, ನೀರಿನ ವ್ಯವಸ್ಥೆ ಮಾಡಿ ಬರಮಾಡಿಕೊಳ್ಳುವ ತಯಾರಿ ನಡೆಸಿದ್ದಾರೆ.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಿ.ಟಿ ರವಿ ಸೇರಿ ಬಿಜೆಪಿ ನಾಯಕರ ದಂಡೇ ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಕಲಬುರಗಿಯತ್ತ ತೆರಳಿದೆ. ಜಗತ್ ಸರ್ಕಲ್ ನಿಂದ ಬಿಜೆಪಿ ಪ್ರತಿಭಟನೆ ಶುರುವಾಗಲಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಕಲಬುರಗಿಯಲ್ಲಿ ವ್ಯಾಪಕ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 8 Ksrp , 8 car ತುಕಡಿ ಸೇರಿ 700 ಜನ ಪೊಲೀಸ್ ನಿಯೋಜನೆಮಾಡಲಾಗಿದ್ದು, 25 ಇನ್ಸಪೇಕ್ಟರ್ 8 acp , 2 Adl sp , 2 sp ನೇತೃತ್ವದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.