ಕೆಲ ವರ್ಷಗಳ ಹಿಂದೆ ಉಡುಪಿ ಶಾಲೆಯಲ್ಲಿ ಹಿಬಾಜ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಶಾಲೆಯಿಂದ ಉಚ್ಚಾಟನೆಯಾಗಿದ್ದ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ ಸದ್ಯ ಮಾಜಿ ಶಾಸಕ ರಘುಪತಿ ಭಟ್ ಪಕ್ಷದಿಂದ ಉಚ್ಚಾಟನೆಯಾಗಿರುವ ಬಗ್ಗೆ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.
ಟ್ವೀಟ್ ಮಾಡಿರುವ ಅಲಿಯಾ ಅಸ್ಸಾದಿ, ” ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು.
ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ” ಎಂದಿದ್ದಾರೆ.
ಮುಂದುವರೆದು, ” ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಆದರೆ, ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ” ಎಂದು ರಘುಪತಿ ಭಟ್ ಅವರನ್ನು ವಿದ್ಯಾರ್ಥಿನಿ ಟ್ಯಾಂಗ್ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಕಳೆ ಅವಧಿಯಲ್ಲಿ ಉಡುಪಿ ಶಾಸಕರಾಗಿದ್ದ ರಘುಪತಿ ಭಟ್ ಅವರಿಗೆ 2023 ರ ವಿಧಾನಸಭಾ ಚುನಾವಣೆ ಬಿಜೆಪಿಯಿಂದ ಟಿಕೆಟ್ ನೀಡಲಿಲ್ಲ.
ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ, ಯಶ್ ಪಾಲ್ ಸುವರ್ಣಾ ಅವರಿಗೆ ಟಿಕಟ್ ನೀಡಲಾಗಿತ್ತು. ಬಳಿಕ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದರೂ ಟಿಕೆಟ್ ಸಿಗಲಿಲ್ಲ. ಆದರೆ, ವಿಧಾನ ಪರಿಷತ್ಗೆ ಟಿಕೆಟ್ ಕೊಡಲಾಗುತ್ತದೆ ಎಂದು ಕಾದು ಕುಳಿತಿದ್ದ ಅವರಿಗೆ ಸದ್ಯ ಟಿಕೆಟ್ ನಿರಾಕರಿಸಲಾಗಿದೆ. ಬಂಡಾಯವಾಗಿ ಸ್ಪರ್ಧೆ ಮಾಡಲು ಮುಂದಾದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.