ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆ ಕುರಿತು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.
ಇದೀಗ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ತೆರಳಿದ್ದಾರೆ. ನಿನ್ನೆ(ಜು.3) ಮೃತಪಟ್ಟ ಬಿಜೆಪಿ ಮುಖಂಡ ಸಿದ್ದೇಶ್ ಯಾದವ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗ್ಯಾರಂಟಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಮಾಜಿ ಸಿಎಂ ಡಿವಿಎಸ್, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ.ನಾಗೇಶ್, N.ಮಹೇಶ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.