ಬೆಂಗಳೂರು: ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ಟಿಕೆಟ್ ಆಕಾಕ್ಷಿಯಾಗಿದ್ದ ರೌಡಿ ಶೀಟರ್ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
ಇಂದು ಬೆಳ್ಳಂಬೆಳಗ್ಗೆ ವೈಯಾಲಿಕಾವಲ್ ನಿವಾಸದ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಕಳೆದ ಬಾರಿ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಮೂಲಕ ಸ್ಪರ್ಧಿಸಲು ಫೈಟರ್ ರವಿ ಮುಂದಾಗಿದ್ದರು. ಆದರೆ ರೌಡಿಶೀಟರ್ ಹಿನ್ನೆಲೆ ಇದೆ ಎಂದು ವಿವಾದ ಆಗಿತ್ತು. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರವಾಗಿ ನಿಂತು ಸ್ಪರ್ಧಿಸಿದ್ದರು