ದೆಹಲಿ: ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ನೀಡಿದೆ.
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಬಾನ್ಸುರಿ ಸ್ವರಾಜ್ ಅವರು ನವದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಘೋಷಿಸಿತು
ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಘೋಷಣೆಯಾಗಿದ್ದಕ್ಕೆ ಸಂಸತ ವ್ಯಕ್ತಪಡಿಸಿರುವ ಬಾನ್ಸುರಿ ಸ್ವರಾಜ್, ನನ್ನ ತಾಯಿ ಸ್ಥಾಪಿಸಿದ ಪರಂಪರೆಗೆ ತಕ್ಕಂತೆ ಬದುಕಲು ಪ್ರಯತ್ನಿಸುತ್ತೇನೆ. ಅವರು ಸ್ವರ್ಗದಿಂದ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.