ತೆಲಂಗಾಣ: ಔಷಧ ತಯಾರಿಕಾ ಘಟಕದಲ್ಲಿ ಬೃಹತ್ ಸ್ಫೋಟ ಸಂಭವಿಸಿದ್ದು, 5 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಹೌದು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿಬಿದ್ದಿದ್ದು, ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳದಿಂದ ಗೊಂದಲದ ವೀಡಿಯೊಗಳು ಹೊರ ಹೊಮ್ಮಿವೆ, ಇದು ಸ್ಫೋಟದ ಪ್ರಮಾಣವನ್ನು ತೋರಿಸುತ್ತದೆ.
ಔಷಧ ಕಂಪನಿಯಲ್ಲಿನ ರಿಯಾಕ್ಟರ್ನಲ್ಲಿ ಸ್ಫೋಟ ಸಂಭವಿಸಿದೆ ಮತ್ತು ಸ್ಫೋಟದ ಪ್ರಭಾವದಿಂದಾಗಿ ಅಲ್ಲೇ ಆಸುಪಾಸಿನಲ್ಲಿ ಕೆಲಸ ಮಾಡುತ್ತಿದ್ದವರು ಕುಸಿದುಬಿದ್ದಿದ್ದಾರೆ. 7 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. 30 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು. ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.