ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1700ಕ್ಕೂ ಹೆಚ್ಚು ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್ಗೆ ಬಿಬಿಎಂಪಿ ಮುಂದಾಗಿದೆ.
ಇದ್ರ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಾಯ್ತು ಡೆಂಘೀ ಭೀತಿ ಹೆಚ್ಚಾಗಿದ್ದು, ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಟ ಮಾಡುವವರಲ್ಲಿ ಢವ ಢವ ಶುರುವಾಗಿದೆ. ಡೆಂಘೀ ಸ್ಪೋಟ ಬೆನ್ನಲ್ಲೇ ಬಿಎಂಆರ್ಸಿಎಲ್ ಎಚ್ಚೆತ್ತುಕೊಂಡಿದ್ದು, ನಮ್ಮ ಮೆಟ್ರೋ ನಿಲ್ದಾಣ ಸುತ್ತಮುತ್ತ, ಕಚೇರಿ ಸುತ್ತಮುತ್ತ ಸ್ವಚ್ಚತೆ ಕಾಪಾಡುವಂತೆ ಸೂಚನೆ ನೀಡಲಾಗಿದೆ.
ನಿಂತ ನೀರು, ಮಳೆ ನೀರು, ಹಸಿ ಕಸ ಸೊಳ್ಳೆಗಳ ಮೊಟ್ಟೆ ಶೇಖರಣೆ ಆಗುವ ಪ್ರದೇಶಗಳಿದ್ರೆ ಅವುಗಳನ್ನ ಸ್ವಚ್ಚಗೊಳಿಸಲು ಹಾಗೂ ಮೆಟ್ರೋ ನಿಲ್ದಾಣದಲ್ಲಿ ದಿನಕ್ಕೆ ಎರಡು ಬಾರಿ ಔಷಧ ಸಿಂಪಡಣೆ ಕಡ್ಡಾಯ ಮಾಡಲು ಸೂಚನೆ ನೀಡಲಾಗಿದೆ. ಆದ್ದರಿಂದ ಈಗಾಗಲೇ ಎಲ್ಲಾ ನಿಲ್ದಾಣಗಳಲ್ಲಿ ನಮ್ಮ ಮೆಟ್ರೋ ಸಿಬ್ಬಂದಿಗಳು ಔಷಧ ಸಿಂಪಡಣೆ ಮಾಡುತ್ತಿದ್ದಾರೆ.