ಬೆಂಗಳೂರು ಉಪ ರೈಲು ಯೋಜನೆ ಚುರುಕುಗೊಳಿಸಲು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಕಾರಿಡಾರ್-2 ವೇಗವಾಗಿ ಅನುಷ್ಠಾನ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು. ಬಿಎಂಟಿಸಿಗೆ ಹೊಸದಾಗಿ 1334 ಹೊಸ ಇವಿ ಬಸ್ ಖರೀದಿಗೆ ನಿರ್ಧಾರ, ಜೊತೆಗೆ ಬಿಎಂಟಿಸಿಗೆ 820 ಬಿಎಸ್6 ಡೀಸೆಲ್ ಬಸ್ ಸೇರ್ಪಡೆ, ಮಹಿಳೆಯರ ಸುರಕ್ಷತೆಗಾಗಿ ಬಿಎಂಟಿಸಿ ಬಸ್ಗಳಲ್ಲಿ ಆ್ಯಪ್ ಅನುಷ್ಠಾನ, ವೆಹಿಕಲ್ ಟ್ರ್ಯಾಕಿಂಗ್ ಹೊಂದಿರುವ ಆ್ಯಪ್ ಅನುಷ್ಠಾನ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್ಎಫ್ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್ಸಿಎಲ್, ಬಿಡಬ್ಲ್ಯುಎಸ್ಎಸ್ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು. 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.