ಶ್ರೀನಗರ: ಗಂಡಾಬಾಲ್ನಿಂದ ಶ್ರೀನಗರದ ಬಟ್ವಾರಕ್ಕೆ ಶಾಲಾ ಮಕ್ಕಳು ಮತ್ತು ಸ್ಥಳೀಯರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು (Boat) ಝೇಲಂ ನದಿಯಲ್ಲಿ ಮುಳುಗಿದ ಪರಿಣಾಮ ಶಾಲಾ ಮಕ್ಕಳು ಸೇರಿ ಹಲವರು ನಾಪತ್ತೆಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ರಾಜ್ಯ ವಿಪತ್ತು ಪರಿಹಾರ ಪಡೆ ನಾಪತ್ತೆಯಾದ ಪ್ರಯಾಣಿಕರಿಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಝೇಲಂ ನದಿಯ ನೀರಿನ ಮಟ್ಟ ಏರಿಕೆಯಾಗಿದೆ.