ಕೋಲಾರ: ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ಇರುವ ಕ್ವಾರಿಹಳ್ಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ದರ್ಶಿನಿ (24) ಮೃತ ವಿದ್ಯಾರ್ಥಿನಿ. ಕ್ವಾರೆಯಲ್ಲಿನ ನೀರಿಗೆ ಜಿಗಿದು ದರ್ಶಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿನಿ ದರ್ಶಿನಿ ಹೊಸಕೋಟೆ ತಾಲೂಕಿನ,
ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವ್ಯಾಸಾಂಗ ಮಾಡುತ್ತಿದ್ದರು. ಇನ್ನು ದರ್ಶಿನಿ ಸಾವಿಗು ಮುಂಚೆ ಸ್ನೇಹಿತರಿಗೆ ದೂರವಾಣಿ ಕರೆ ಮಾಡಿದ್ದಾಳೆ ಎಂಬುವುದು ತಿಳಿದು ಬಂದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ದರ್ಶನಿಯ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ