ಬೆಂಗಳೂರು:- ಬಾಂಬ್ ಬೆದರಿಕೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಸಂದೇಶ ಬಂದಿದ್ದು, ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣವನ್ನು ವರ್ಗಾವಣೆ ಮಾಡಿ, ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.
ಜ.6ರಂದು ಕಿಡಿಗೇಡಿಗಳು ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕಳುಹಿಸಿದ್ದರು. ಮ್ಯೂಸಿಯಂನಲ್ಲಿ ಹಲವು ಸ್ಫೋಟಕಗಳನ್ನು ಬಚ್ಚಿಡಲಾಗಿದೆ. ಎಲ್ಲವೂ ಸ್ಫೋಟಗೊಳ್ಳುತ್ತವೆ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದರು. ಸ್ಥಳಕ್ಕೆ ತೆರಳಿದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು, ತಪಾಸಣೆ ನಡೆಸಿದ್ದರು. ಅದಾದ ಮೇಲೆ ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿತ್ತು ಎನ್ನಲಾಗಿದೆ.