ಮುಂಬೈನ್ 40 ಆಸ್ಪತ್ರೆಗಳು ಹಾಗೂ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಜಸ್ಲೋಕ್ ಆಸ್ಪತ್ರೆ, ರಹೇಜಾ ಆಸ್ಪತ್ರೆ, ಸೆವೆನ್ ಹಿಲ್ಸ್ ಆಸ್ಪತ್ರೆ, ಕೊಹಿನೂರ್ ಆಸ್ಪತ್ರೆ, ಕೆಇಎಂ ಆಸ್ಪತ್ರೆ, ಜೆಜೆ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಸೇರಿದಂತೆ ನಗರದಾದ್ಯಂತ ಹಲವಾರು ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ.
ಹೆಸರಾಂತ ಆಸ್ಪತ್ರೆಗಳು ಬೆಡ್ಗಳ ಕೆಳಗೆ ಮತ್ತು ಬಾತ್ರೂಮ್ಗಳಲ್ಲಿ ಬಾಂಬ್ಗಳನ್ನು ಇಡಲಾಗಿದೆ ಎಂದು ಹೇಳುವ ಬೆದರಿಕೆ ಇಮೇಲ್ಗಳನ್ನು ಸ್ವೀಕರಿಸಲಾಗಿದೆ. ವಿಪಿಎನ್ ನೆಟ್ವರ್ಕ್ ಬಳಸಿ ಈ ಎಲ್ಲಾ ಆಸ್ಪತ್ರೆಗಳಿಗೆ ಬೆದರಿಕೆ ಇಮೇಲ್ಗಳನ್ನು ಕಳುಹಿಸಲಾಗಿದೆ
ಹೆಸರಿನ ವೆಬ್ಸೈಟ್ನಿಂದ ಬೆದರಿಕೆ ಇಮೇಲ್ಗಳನ್ನು ಕಳುಹಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರತಿಯೊಂದು ಇಮೇಲ್ ಅನ್ನು ಪ್ರತ್ಯೇಕವಾಗಿ ರಚಿಸಲಾಗಿದೆ ಮತ್ತು 50 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಬೆದರಿಕೆ ಬಂದ ತಕ್ಷಣ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಆಸ್ಪತ್ರೆಗಳಲ್ಲಿ ತೀವ್ರ ಶೋಧ ನಡೆಸಿದರೂ ಯಾವುದೇ ಅನುಮಾನಾಸ್ಪದ ವಸ್ತುಗಳು