ಹುಬ್ಬಳ್ಳಿ: ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಯೂ ನಾನಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಈ ಹಿಂದೆಯೂ ಹೇಳಿದ್ದೇನೆ. ನಾನು ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿ ಅಲ್ಲ ಎಂದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭವಾಗಿರುವ ಏಳು ವಿಶ್ವವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪದಲ್ಲಿ ಮುಚ್ಚುವ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಬೊಮ್ಮಾಯಿ,
ಹೊಸ ಸರ್ಕಾರ ಬಂದು ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾಗಿ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೇ ವಿಶೇಷವಾಗಿರುವ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸದೇ ಈಗಾಗಲೇ ಇರುವಂತಹ ಕಾರ್ಯಕ್ರಮಗಳನ್ನು ಪುನಃ ಘೋಷಿಸಿ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದ್ದೀರಿ ಎಂದಿದ್ದಾರೆ.
