ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಎಂ. ಸತೀಶ್ ರೆಡ್ಡಿ ಅವರ ತಾಯಿ ವಿಧಿವಶರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪಾಪಮ್ಮ ಅವರು ಇಂದು ಬೆಳಗ್ಗೆ ಸತೀಶ್ ರೆಡ್ಡಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.
ಹೊಂಗಸಂದ್ರದ ಶಾಸಕರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹೊಂಗಸಂದ್ರದ ರುದ್ರಭೂಮಿಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ.