2023ರಲ್ಲಿ ಏಕದಿನ ವಿಶ್ವಕಪ್ ಹಾಗೂ ಏಷ್ಯಾ ಕಪ್ ಟೂರ್ನಿ ಸೇರಿದಂತೆ ಹಲವು ದ್ವಿಪಕ್ಷೀಯ ಸರಣಿಗಳಲ್ಲಿ ಭಾರತ ತಂಡದ ಪರ ಬೌಲರ್ಗಳು ಮಹತ್ವದ ಪ್ರದರ್ಶನವನ್ನು ತೋರಿದ್ದಾರೆ. ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಸರಣಿ ಗೆದ್ದು ಕೊಟ್ಟಿದ್ದ ಬೌಲರ್ಗಳು ಏಷ್ಯಾಕಪ್ ಟೂರ್ನಿಯಲ್ಲೂ ಟೀಮ್ ಇಂಡಿಯಾಗೆ ಟ್ರೋಫಿ ಗೆಲ್ಲಲು ನೆರವು ನೀಡಿದ್ದರು.
1. ಶಾಹೀನ್ ಶಾ ಅಫ್ರಿದಿ ( ಪಾಕಿಸ್ತಾನ)
ಎಡಗೈ ವೇಗಿ ಶಾಹೀನ್ ಶಾ ಅಫ್ರಿದಿ ಪಾಕಿಸ್ತಾನ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದು, ಏಷ್ಯಾ ಕಪ್ ಟೂರ್ನಿಯಲ್ಲಿ 10 ಹಾಗೂ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 18 ವಿಕೆಟ್ ಪಡೆದು ಪಾಕ್ ಪರ ಟಾಪ್ ವಿಕೆಟ್ ಟೇಕರ್ ಆಗಿದ್ದಾರೆ.
2. ಮೊಹಮ್ಮದ್ ಶಮಿ (ಭಾರತ)
ತಮ್ಮ ವೇಗದ ಬೌಲಿಂಗ್ನಿಂದ ವಿಶ್ವ ಶ್ರೇಷ್ಠ ಬ್ಯಾಟರ್ಗಳಿಗೆ ಸಿಂಹ ಸ್ವಪ್ನವಾಗಿರುವ ಅನುಭವಿ ವೇಗಿ ಮೊಹಮ್ಮದ್ ಶಮಿ, 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 24 ಪಡೆದು ಟಾಪ್ ವಿಕೆಟ್ ಟೇಕರ್ ಆಗಿದ್ದಾರೆ
3. ಮೊಹಮ್ಮದ್ ಸಿರಾಜ್ (ಭಾರತ)
ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 21 ರನ್ಗಳಿಗೆ 6 ವಿಕೆಟ್ ಪಡೆದಿದ್ದ ಮೊಹಮ್ಮದ್ ಶಮಿ ಟೀಮ್ ಇಂಡಿಯಾಗೆ ಟ್ರೋಫಿ ಗೆದ್ದುಕೊಡಲು ನೆರವು ನೀಡಿದ್ದರು.
4. ಕುಲ್ದೀಪ್ ಯಾದವ್ (ಭಾರತ)
ಕಳೆದ ಒಂದು ವರ್ಷದಿಂದ ಅದ್ಬುತ ಬೌಲಿಂಗ್ ಪ್ರದರ್ಶನ ತೋರುತ್ತಿರುವ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್, ಏಷ್ಯಾಕಪ್ ಟೂರ್ನಿಯಲ್ಲಿ 9 ಹಾಗೂ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 15 ವಿಕೆಟ್ ಪಡೆದಿದ್ದಾರೆ
5.ಸಂದೀಪ್ ಲಾಮಿಚನ್ನೆ (ನೇಪಾಳ)
ಕಣಿವೆ ರಾಜ್ಯದ ಗೂಗ್ಲಿ ಬೌಲರ್ ಸಂದೀಪ್ ಲಾಮಿಚನ್ನೆ ತಮ್ಮ ಸ್ಪಿನ್ ಮೋಡಿಯಿಂದ ಎದುರಾಳಿ ಬ್ಯಾಟರ್ಗಳ ರನ್ ದಾಹಕ್ಕೆ ಕಡಿವಾಣ ಹಾಕುವಲ್ಲಿ ನಿಸ್ಸೀಮರು.