ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಅನುಮಾನ ಎನ್ನಲಾಗುತ್ತಿದೆ. ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡೆಪ್ಯುಟಿ ಮ್ಯಾನೇಜರ್ ಜೂನ್ 12 ರಂದು ತಮಗೆ ಪತ್ರ ಬರೆದು ಹೆಚ್ಚುವರಿ ಅಕ್ಕಿ ಕೊಡುವುದಾಗಿ ತಿಳಿಸಿದ್ದರು. ಇದಾದ ಬಳಿಕ ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದು, ಅಕ್ಕಿ ಸಂಗ್ರಹ ಇದ್ದರೂ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ಹೀಗಾಗಿ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದ ನಿರ್ಧಾರ ಸಂಕಷ್ಟ ತಂದೊಡ್ಡುತ್ತ ಎನ್ನಲಾಗುತ್ತಿದೆ.
ಜುಲೈ ಒಂದರಿಂದ ಜಾರಿಯಾಗಬೇಕಿದ್ದ ಅನ್ನಭಾಗ್ಯ ಯೋಜನೆಗೆ ಕತ್ತರಿ ಬೀಳುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ. FCI ನಿರ್ಧಾರದಿಂದಾಗಿ ಆಹಾರ ಇಲಾಖೆಗೆ ದೊಡ್ಡ ಟೆನ್ಷನ್ ಶುರುವಾಗಿದೆ. ಅನ್ನ ಭಾಗ್ಯ ಯೋಜನೆಗೆ ಎಫ್ಸಿಐ ನಿಂದ ಅಕ್ಕಿ ರವಾನೆ ಮಾಡಿಕೊಳ್ಳಲು ಆಹಾರ ಇಲಾಖೆ ಸಿದ್ದತೆ ನಡೆಸಿತ್ತು.. ಆದ್ರೀಗಾ ಎಫ್ಸಿಐನಿಂದ ಅಕ್ಕಿ ಸ್ಥಗಿತ ಮಾಡಿದ್ದು ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆ ಜಾರಿಯಾಗುತ್ತ ಎನ್ನುವ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ.