ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ಇಂದು (ಮಾರ್ಚ್ 24) ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಮೃತ ಪ್ರದೀಪ್ ಸರ್ಕಾರ ಹಲವು ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಘಳಿಸಿದ್ದರು. ಸಿನಿಮಾ ಮಾತ್ರವಲ್ಲದೆ ವೆಬ್ ಸೀರಿಸ್ಗಳನ್ನು ನಿರ್ದೇಶಿಸಿ ಫೇಮಸ್ ಆಗಿದ್ದ ಪ್ರದೀಪ್ ಸರ್ಕಾರ್ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ಪ್ರದೀಪ್ ಸರ್ಕಾರ್ ಅವರು ದೀರ್ಘಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರಿಗೆ ಚಿಕಿತ್ಸೆ ನೀಡುತ್ತಿದ್ದರು ಯಾವುದೇ ಪ್ರಯೋಜನ ಆಗಿರಲಿಲ್ಲ. ಮಾರ್ಚ್ 23 ರಾತ್ರಿ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮುಂಜಾನೆ 3.30 ಸುಮಾರಿಗೆ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ಪ್ರದೀಪ್ ಆಪ್ತರು ತಿಳಿಸಿದ್ದಾರೆ.
ಖ್ಯಾತ ನಿರ್ದೇಶಕ ರಾಜ್ಕುಮಾರ್ ಹಿರಾನಿ ಜೊತೆ ಪ್ರದೀಪ್ ಸರ್ಕಾರ್ ಕೆಲಸ ಮಾಡುವ ಮೂಲಕ ವೃತ್ತಿ ಜೀವನ ಆರಂಭಿಸಿದರು. ‘ಮುನ್ನಾ ಭಾಯ್ ಎಂಬಿಬಿಎಸ್’ ಚಿತ್ರಕ್ಕೆ ಅವರು ಕೂಡ ಎಡಿಟರ್ ಆಗಿದ್ದರು. ಪ್ರದೀಪ್ ಸರ್ಕಾರ್ ಅವರು ಹೊಸ ಸಿನಿಮಾ ನಿರ್ದೇಶನ ಮಾಡಬೇಕಿತ್ತು. ಇದರಲ್ಲಿ ಕಂಗನಾ ರಣಾವತ್ ಅವರು ಮುಖ್ಯಭೂಮಿಕೆ ಮಾಡಬೇಕಿತ್ತು. ಈ ಸಿನಿಮಾ ಕೆಲಸಗಳು ಆರಂಭ ಆಗುವ ಮೊದಲೇ ಪ್ರದೀಪ್ ಸರ್ಕಾರ ನಿಧನ ಹೊಂದಿದ್ದಾರೆ.