ಹೊಸದಿಲ್ಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜ್ವರದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರಿಗೆ ದಿಲ್ಲಿಯ ಶ್ರೀ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಯಿಂದ ಮಾಹಿತಿ ಸಿಕ್ಕಿದೆ
ಸೋನಿಯಾ ಗಾಂಧಿ ಅವರನ್ನು ನಿಗಾವಣೆಯಲ್ಲಿ ಇರಿಸಲಾಗಿದ್ದು, ಅವರಿಗೆ ಅನೇಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
ಸೋನಿಯಾ ಅವರನ್ನು ಗುರುವಾರವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಕನ್ಸಲ್ಟೆಂಟ್ ಡಾ. ಅರೂಪ್ ಬಸು ಮತ್ತು ಅವರ ತಂಡ ಸೋನಿಯಾ ಅವರಿಗೆ ಚಿಕಿತ್ಸೆ ನೀಡುತ್ತಿದೆ.