ನರೇಂದ್ರ ಮೋದಿ ಅವರು ಮತ್ತೇ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೆ ಪ್ರಧಾನಿ ಆಗುತ್ತಾರೆ. ಇದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ನಾವು ಕನಿಷ್ಠ 24 ರಿಂದ 25 ಸ್ಥಾನಗಳನ್ನು ಗೆಲ್ಲುತ್ತೇವೆ.

ಕಾಂಗ್ರೆಸ್ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆಗಿದ್ದರೂ ಕಾಂಗ್ರೆಸ್ನಲ್ಲಿ ಪ್ರಧಾನಿ ಆಗುವ ಯೋಗ್ಯತೆ ಯಾರಿಗಿದೆ ಎಂದು ಪ್ರಶ್ನೆ ಮಾಡಿದ್ದ ಯಡಿಯೂರಪ್ಪ ವಿಧಾನಸಭೆಯ ಚುನಾವಣೆಯ ರೀತಿಯೇ ಬೇರೆ.
ಆದರೆ ದೇಶದಲ್ಲಿ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಎಂಬ ಅಭಿಪ್ರಾಯ ಎಲ್ಲರಲೂ ಇದೆ. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದರು. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಿದ್ರೆ ಸಿಬಿಐಗೆ ವಹಿಸಬೇಕು. ಬಹುತೇಕ ಜನರ ಅಭಿಪ್ರಾಯ ಇದಾಗಿದ್ದು, ಇದರಿಂದ ಪೆನ್ ಡ್ರೈವ್ ಪ್ರಕರಣವನ್ನ ಸಿಬಿಐಗೆ ವಹಿಸಿದ್ರೆ ಮಾತ್ರ ತನಿಖೆ ಪಾರದರ್ಶಕವಾಗಿ ನಡೆಯುತ್ತದೆ ಎಂದರು.