ರಾಜಧಾನಿ ಬೆಂಗಳೂರಿನಲ್ಲಿ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತ ನಿರುದ್ಯೋಗಿಗಳು ಕೂಡಲೇ ಅಪ್ಲೈ ಮಾಡಬಹುದು. ಒಟ್ಟು 1 ವಿಸಿಟಿಂಗ್ ಕನ್ಸಲ್ಟೆಂಟ್ (ಆಂಕೊ ಸರ್ಜರಿ)(Visiting Consultant) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತರು ಆಫ್ಲೈನ್(Offline) ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂ.ಎಸ್-ENT, MCH ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಒಂದು ಭೇಟಿಗೆ 7,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017