ಬಾಂಗ್ಲಾದೇಶದಲ್ಲಿ ಭಾರಿ ಸದ್ದು ಮಾಡುತ್ತಿರುವ ವಿಪಕ್ಷ ನಾಯಕರ #BoycotIndia ಅಭಿಯಾನಕ್ಕೆ ಪ್ರಧಾನಿ ಶೇಖ್ ಹಸೀನಾ ತಿರುಗೇಟು ನೀಡಿದ್ದಾರೆ. india-Out ಎನ್ನುವ ಮೊದಲು ನಿಮ್ಮ ಪತ್ನಿಯರು ಉಟ್ಟಿರುವ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ ಎಂದು ಸವಾಲು ಹಾಕಿದ್ದಾರೆ.
ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂದು ಒತ್ತಾಯಿಸುವ ಪ್ರತಿ ಪಕ್ಷದ ನಾಯಕರು ತಮ್ಮ ಪತ್ನಿಯರು ಮನೆಯಲ್ಲಿ ಪೆಟ್ಟಿಗೆಯಲ್ಲಿ ಇಟ್ಟಿರುವ ಮೇಡ್ ಇನ್ ಇಂಡಿಯಾ ಸೀರೆಗಳನ್ನು ಮೊದಲು ಸುಟ್ಟು ಹಾಕಬೇಕು ಎಂದು ‘ಇಂಡಿಯಾ ಔಟ್’ ಅಭಿಯಾನ ನಡೆಸುತ್ತಿರುವ ವಿರೋಧ ಪಕ್ಷಗಳ ನಾಯಕರಿಗೆ ಟಾಂಗ್ ನೀಡಿದ್ದಾರೆ.