ಚಾಮರಾಜನಗರ:- ಭಕ್ತರಿದ್ದ ಬಸ್ ಪಲ್ಟಿ ಹೊಡೆದ ಹಿನ್ನೆಲೆ 16 ಜನರಿಗೆ ಗಂಭೀರ ಗಾಯವಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಜರುಗಿದೆ.
ಘಟನೆಯಿಂದ ಅದೃಷ್ಡವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಭಕ್ತರು ಬಿಳಿಗಿರಿರಂಗನಬೆಟ್ಟದಲ್ಲಿ ಪೂಜೆಗೆ ಆಗಮಿಸಿದ್ದರು. ಶನಿವಾರ ಸಂಜೆ ಘಟನೆ ಜರುಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಕುಟುಂಬವೊಂದು ಬಿಳಿಗಿರಿರಂಗನಬೆಟ್ಟಕ್ಕೆ ಬಂದಿತ್ತು.
ಪೂಜೆ ಮುಗಿಸಿಕೊಂಡು ಹಿಂತಿರುಗುವಾಗ ಗವಿಬೋರೆ ಹತ್ತಿರ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಸ್ ಬಿದ್ದಿದೆ. ಘಟನೆಯಲ್ಲಿ 16ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು ಎಲ್ಲರನ್ನೂ ಯಳಂದೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಖಾಸಗಿ ಬಸ್ ಚಾಲಕ ಪರಾರಿ ಆಗಿದ್ದಾರೆ.
ಯಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.