ಬಸ್ ಪಲ್ಟಿಯಾಗಿ 5 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ(Uttar Pradesh) ಜಲೌನ್ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಸ್ನಲ್ಲಿ 40 ಜನರಿದ್ದರು, ಲೌನ್ ಜಿಲ್ಲೆಯಲ್ಲಿ ಮದುವೆಗೆ ಅತಿಥಿಗಳನ್ನು ಸಾಗಿಸುತ್ತಿದ್ದ ಬಸ್ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಏತನ್ಮಧ್ಯೆ, ಶನಿವಾರ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಬಸ್ಸು ಬಿಹಾರದಿಂದ ದೆಹಲಿಗೆ ಸುಮಾರು 40 ಜನರೊಂದಿಗೆ ಪ್ರಯಾಣಿಸುತ್ತಿತ್ತು ಎಂದು ಸ್ಥಳೀಯ ಆಡಳಿತ ತಿಳಿಸಿದೆ.