ಬೆಂಗಳೂರು ; ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆಗೆ ಬೆಂಗಳೂರಿನ ಶಕ್ತಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಎಂಬುದು ಸುಳ್ಳು ಆರೋಪ.
ಬಿಜೆಪಿ ನಾಯಕರು ಸುಮ್ಮನೇ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ರಾಜ್ಯದಲ್ಲಿಯೇ ಅಕ್ಕಿ ಸಿಗುವುದಾದರೆ ಮೊದಲು ಬಿ.ವೈ. ವಿಜಯೇಂದ್ರ ಅವರ ಮಿಲ್ ನಲ್ಲಿ ಎಷ್ಟು ಅಕ್ಕಿ ಇದೆ ಅದನ್ನು ಕೊಡಲಿ ಎಂದು ತಿರುಗೇಟು ನೀಡಿದರು.