ಬೆಂಗಳೂರು: ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಮುಂದುವರಿಸಿ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಅಲ್ಲದೇ, ಪರಿಸರ ರಾಯಭಾರಿಯಾಗಿ ಸಾಲುಮರದ ತಿಮ್ಮಕ್ಕ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.