ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ವಿರುದ್ಧ ಸ್ವಪಕ್ಷ ಸದಸ್ಯರೆ ತಿರುಗಿ ಬಿದಿದ್ದಾರೆ. ಟ್ರುಡೊ ವಿರುದ್ಧ ಅಸಮಾಧಾನ ಭುಗಿಲೆದಿದ್ದು ಲಿಬರಲ್ ನ 24 ಸದಸ್ಯರು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಇದು ರಾಜಕೀಯವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಬುಧವಾರ ಲಿಬರಲ್ ಪಕ್ಷವು ಸಭೆ ನಡೆಸಿದ್ದು ಈ ವರ್ಷ ಜೂನ್ ಮತ್ತು ಸೆಪ್ಟೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ತೀವ್ರ ಹಾನಿಯಾಗಲು ಪ್ರಧಾನಿ ಟ್ರುಡೊ ಅವರ ಧೋರಣೆಯೇ ಕಾರಣ ಎಂದು ಸಭೆಯಲ್ಲಿ ಸದಸ್ಯರು ಅತೃಪ್ತಿ ವ್ಯಕ್ತಪಡಿಸಿದರು. ಈ ವೇಳೆ ಸಂಸದರ ಸಭೆಯಲ್ಲಿ ಭಾರೀ ಅಸಮಾಧಾನ ಸ್ಫೋಟಗೊಂಡಿದೆ. 24 ಸಂಸದರು ಟ್ರುಡೋ ಅವರು ಅ.28ರ ಒಳಗಡೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪತ್ರಕ್ಕೆ ಸಹಿ ಹಾಕಿದ್ದಾರೆ.
ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಾಡದ ಮಾಧ್ಯಮಗಳು ವರದಿ ಮಾಡಿವೆ.
ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸಂಸದರಿಗೆ ಮಾತನಾಡಲು ಅವಕಾಶ ನೀಡಲಾಗಿತ್ತು. ಕ್ಯಾಬಿನೆಟ್ ಮಂತ್ರಿ ಸ್ಥಾನ ಹೊಂದಿರದ ಸುಮಾರು 20 ಮಂದಿ ಸದಸ್ಯರು ಮುಂದಿನ ಚುನಾವಣೆಗೆ ಮೊದಲು ಟ್ರುಡೊ ಅವರನ್ನು ಪ್ರಧಾನಿ ಪಟ್ಟದಿಂದ ಕೆಳಗೆ ಇಳಿಸಬೇಕೆಂದು ಆಗ್ರಹಿಸಿದ್ದಾರೆ.