ಭಾರತವು ತನ್ನ ರಾಜತಾಂತ್ರಿಕರನ್ನು ಬಳಸಿಕೊಂಡು ರಹಸ್ಯ ಕಾರ್ಯಚಾರಣೆಗಳನ್ನು ನಡೆಸುವ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಕೆನಡಾದಲ್ಲಿ ಅಸುರಕ್ಷಿತ ಭಾವನೆ ಮೂಡಿಸುತ್ತಿದೆ. ಈ ಮೂಲಕ ಭಾರತವು ಬಹುದೊಡ್ಡ ತಪ್ಪು ಮಾಡಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದು ಇದಕ್ಕೆ ಭಾರತ ತಿರುಗೇಟು ನೀಡಿದೆ.
ಸಿಖ್ ಉಗ್ರಗಾಮಿ ಹರ್ದೀಪ್ ಹತ್ಯೆಯ ತನಿಖೆಗೆ ರಾಯಭಾರಿಯನ್ನು ಸಂಪರ್ಕಿಸುವ ಒಟ್ಟಾವಾ ಅವರ ಆರೋಪಗಳನ್ನು ಬಲವಾಗಿ ತಳ್ಳಿಹಾಕಿದ ನಂತರ ಭಾರತವು ಕೆನಡಾದ ಆರು ರಾಜತಾಂತ್ರಿಕರನ್ನು ಹೊರಹಾಕಿದೆ. ಅಲ್ಲದೆ ತನ್ನ ಹೈ ಕಮಿಷನರ್ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ ಕೆನಡಾ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.
ಕೆನಡಾ ಆರು ಭಾರತೀಯ ರಾಜತಾಂತ್ರಿಕರನ್ನು ಹಿಂತೆಗೆದುಕೊಂಡಿರುವುದಾಗಿ ಭಾರತ ಸರ್ಕಾರ ನಿನ್ನೆ ಘೋಷಿಸಿದೆ. ಕಳೆದ ವರ್ಷ ಸಿಖ್ ತೀವ್ರಗಾಮಿ ಹರ್ದೀಪ್ ಸಿಂಗ್ ನಿಜ್ಜರ ಹತ್ಯೆಯಲ್ಲಿ ಭಾರತೀಯ ಏಜೆಂಟ್ಗಳ ಕೈವಾಡವಿದೆ ಎಂಬ ಕೆನಡಾದ ಆರೋಪವನ್ನು ಭಾರತ ಬಲವಾಗಿ ತಳ್ಳಿ ಹಾಕಿದ್ದು ಆ ಬಳಿಕ ಕೆನಡಾದ ಆರು ಏಜೆಂಟರ್ ಗಳನ್ನು ಭಾರತದಿಂದ ತೆರಳುವಂತೆ ಖಡಕ್ ಸೂಚನೆ ನೀಡಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್ಗಳ “ಸಂಭಾವ್ಯ” ಒಳಗೊಳ್ಳುವಿಕೆಯ ಆರೋಪ ಮಾಡಿದ್ದರು. ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ತೀವ್ರ ಒತ್ತಡಕ್ಕೆ ಒಳಗಾಗಿದ್ದವು.
ನರಹತ್ಯೆ ಸೇರಿದಂತೆ ಕೆನಡಾದಲ್ಲಿ ವ್ಯಾಪಕ ಹಿಂಸಾಚಾರದಲ್ಲಿ ಭಾರತ ಸರ್ಕಾರದ ಏಜೆಂಟರು ಪಾತ್ರ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಆರ್ಸಿಎಂಪಿ ಮುಖ್ಯಸ್ಥರು ಆರೋಪಗಳನ್ನು ಹೊರಿಸಿದ ಕೆಲವೇ ಗಂಟೆಗಳ ನಂತರ ಟ್ರುಡೊ ನಿನ್ನೆ ಸುದ್ದಿಗೋಷ್ಠಿ ನಡೆಸಿ ನಮ್ಮ ಸಾರ್ವಜನಿಕ ಸುರಕ್ಷತೆಗೆ ಭಾರತದಿಂದ ಗಂಭೀರ ಅಪಾಯವಿದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅಮೆರಿಕ ತನ್ನ ಎರಡು ನಿಕಟ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ಬಗ್ಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.