ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ಪೀಠವು 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು, ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ಶಿಕ್ಷಣ ಇಲಾಖೆಗೆ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.