ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ(Assembly Election) ಮತದಾನ ಪ್ರಕ್ರಿಯೆಯು ಮೇ 10 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದೆ. ಆದರೆ, ಯಾವುದೇ ರಾಜಕೀಯ ಪಕ್ಷಗಳು ಅಥವಾ ಪಕ್ಷದ ಅಭ್ಯರ್ಥಿಗಳು ಮತದಾರರನ್ನು ಮತಗಟ್ಟೆಗಳಿಗೆ ತಮ್ಮ ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ. ಕರ್ನಾಟಕ ವಿಧಾನಸಭಾ ಚುನಾವನೆಯ ಮತದಾನದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಅಗತ್ಯ ಸಿದ್ಧತೆಗಳನ್ನು ನಡೆಸುತ್ತಿದೆ.
ಎಲ್ಲಾ ಅರ್ಹ ಮತದಾರರು ತಪ್ಪದೇ ಮತದಾನ ಮಾಡಲು ಕರೆ ನೀಡಿದರ. ಚುನಾವಣಾ ನಿಯಮಗಳ ಪ್ರಕಾರ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಮತ ಹಾಕಲು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದೊಳಗಿನ ಮತದಾರರನ್ನು ತಮ್ಮ ವಾಹನಗಳಲ್ಲಿ ಕರೆತರುವಂತಿಲ್ಲ. ಯಾವುದೇ ಮತದಾರರನ್ನು ಬಸ್ ಅಥವಾ ಇತರ ವಾಹನದಲ್ಲಿ ಕರೆತರುವುದು ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.