ಬೆಂಗಳೂರು ;- ಪತಿಯ ಕತ್ತು ಸೀಳಿ ಕೊಲೆಗೈದ ಮಹಿಳೆಗೆ ಜಾಮೀನು ನೀಡಲು ಬೆಂಗಳೂರಿನ ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೇ ಮಹಿಳೆ ಎಂಬ ಕಾರಣಕ್ಕಾಗಿ ಜಾಮೀನು ಮಂಜೂರಾತಿಗೆ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಆರೋಪಿ ಡಿಲ್ಲಿ ರಾಣಿ ಮಹಿಳೆಯಾಗಿದ್ದು, ಜಾಮೀನು ನೀಡಬೇಕು ಎಂಬ ಆಕೆಯ ಪರ ವಕೀಲರ ವಾದ ತಿರಸ್ಕರಿಸಿದ ಹೈಕೋರ್ಟ್, ಡಿಲ್ಲಿ ರಾಣಿ ಸಹ ಘಟನೆಯಲ್ಲಿ ಗಾಯಗೊಂಡಿರುವ ಕಾರಣ ಆಕೆ ಅಮಾಯಕಳಾಗಿದ್ದಾರೆ ಎಂಬ ವಕೀಲರು ವಾದ ಒಪ್ಪಲಾಗದು. ಅರ್ಜಿದಾರೆ ಹಾಗೂ ಆಕೆಯ ಅಪ್ರಾಪ್ತ ಮಕ್ಕಳಿಬ್ಬರು ನೆಲೆಸಿದ್ದ ಮನೆಯಲ್ಲಿ ಪತಿ ಶಂಕರರೆಡ್ಡಿ ಕೊಲೆಯಾಗಿದ್ದಾರೆ. ಪ್ರಕರಣದ ಎರಡನೇ ಆರೋಪಿನೊಂದಿಗೆ ಡಿಲ್ಲಿ ರಾಣಿ ಅಕ್ರಮ ಸಂಬಂಧ ಹೊಂದಿರುವುದನ್ನು ಘಟನೆಯ ಮೂವರ ಸಾಕ್ಷಿಗಳ ಹೇಳಿಕೆ ಸ್ಪಷ್ಟಪಡಿಸುತ್ತದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತಿ ಶಂಕರರೆಡ್ಡಿಯನ್ನು ಕೊಲೆ ಮಾಡಲಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಡಿಲ್ಲಿ ರಾಣಿ ಎಂಬುವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ.