ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ವಾಯು ಮಾಲಿನ್ಯಕ್ಕೆ (Air Pollution) ಕಾರಣವಾಗುವ ವಿವಿಧ ಮೂಲಗಳನ್ನು ತಿಳಿಸುವ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಮಾಲಿನ್ಯಕ್ಕೆ ಕಾರಣವಾಗುವ ಮೂಲಗಳು ನಿರ್ದಿಷ್ಟ ಪ್ರಮಾಣ ತಿಳಿಯದೇ ಮಾಲಿನ್ಯವನ್ನು ಕಡಿಮೆ ಮಾಡುವ ನೀತಿಯನ್ನು ರಚಿಸಲು ಸಾಧ್ಯವಿಲ್ಲ ಎಂದು ಸಚಿವೆ ಅತಿಶಿ (Minister Atishi) ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 3 ವರ್ಷಗಳ ಹಿಂದೆ ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಚರಲ್ ರಿಸರ್ಚ್ (ICAR) ಬಿಡುಗಡೆ ಮಾಡಿದ ದತ್ತಾಂಶವನ್ನು ಉಲ್ಲೇಖಿಸಿದ್ದ ಅತಿಶಿ ದೆಹಲಿ ಮಾಲಿನ್ಯವು ಹರಿಯಾಣ ಮತ್ತು ಪಂಜಾಬ್ನಲ್ಲಿ (Punjab) ಹುಲ್ಲು ಸುಡುವಿಕೆಯೊಂದಿಗೆ ನೇರವಾಗಿ ಸಂಬಂಧ ಹೊಂದಿದೆ ಎಂದರು.
ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳ ವಿರುದ್ಧ ಸ್ವಯಂಪ್ರೇರಿತ ನಿರ್ಲಕ್ಷ್ಯದ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವಂತೆ ಅವರು ವಾಯು ಗುಣಮಟ್ಟ ಆಯೋಗಕ್ಕೆ ಮನವಿ ಮಾಡಿದರು. 2 ರಾಜ್ಯಗಳಲ್ಲಿ ಹುಲ್ಲು ಸುಡುವುದರಿಂದ ದೆಹಲಿಯಲ್ಲಿ ಅಸಹನೀಯ ವಾಯುಮಾಲಿನ್ಯ ಉಂಟಾಗುತ್ತಿದೆ ಎಂದು ತಿಳಿಸಿದರು.