ಲಂಡನ್: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಅಧಿಕೃತ ನಿವಾಸ ಹಾಗೂ ಕಚೇರಿಯ ಕಟ್ಟಡದ ಗೇಟ್ ಗೆ ಕಾರು ಡಿಕ್ಕಿ ಹೊಡೆದಿದ್ದು ಈ ಹಿನ್ನೆಲೆಯಲ್ಲಿ ಕಾರಿನ ಚಾಲಕನನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಮಾಹಿತಿ ನೀಡಿದ್ದಾರೆ.
‘ಸ್ಥಳೀಯ ಕಾಲಮಾನ ಸುಮಾರು 16:20 ಗಂಟೆಗೆ ವೈಟ್ಹಾಲ್ನ ಡೌನಿಂಗ್ ಸ್ಟ್ರೀಟ್ ನಲ್ಲಿ ಗೇಟ್ ಗೆ ಕಾರೊಂದು ಡಿಕ್ಕಿ ಹೊಡೆದಿದೆ’ ಎಂದು ಮೆಟ್ರೋಪಾಲಿಟನ್ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪರಾಧ ಕೃತ್ಯ ಎಸಗುವ ಉದ್ದೇಶ ಮತ್ತು ಅಪಾಯಕಾರಿ ಚಾಲನೆಯ ಅನುಮಾನದ ಮೇಲೆ ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳು ಚಾಲಕನನ್ನು ಬಂಧಿಸಿದ್ದಾರೆ. ಆತನಿಗೆ ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ವಿಚಾರಣೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ನಡೆದ ವೇಳೆ ರಿಷಿ ಸುನಕ್ ಅವರು ಕಚೇರಿಯಲ್ಲಿ ಇದ್ದರಾ ಅಥವಾ ಹೊರಗೆ ಹೋಗಿದ್ದರ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಬಳಿಕ ಪ್ರಧಾನಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.