ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಕಾರ್ ಡ್ರೈವರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ ಕಾಲೋನಿಯ ಮನೆಯಲ್ಲಿ ನಡೆದಿದೆ. ಸುನೀಲ್ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಚಾಲಕನಾಗಿದ್ದಾನೆ.
ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ನಾವು ಬರೋ ಮೊದಲೆ ಶವ ಕೆಳಗಿಳಿಸಿದ್ದಾರೆ ಅಂತಾ ಸಂಬಂಧಿಕರು ಆರೋಪ ಮಾಡಿದ್ದು, ಸಧ್ಯ ಲಕ್ಷ್ಮೇಶ್ವರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಶವ ರವಾನೆ ಮಾಡಲಾಗಿದೆ.
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇನ್ನೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.