ಶಿಕ್ಷೆಗೆ ಗುರಿಯಾಗಿದ್ದ ಪೊಲೀಸ್ ಅಧಿಕಾರಿ ವಿರುದ್ಧದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು

ಬೆಂಗಳೂರು: ಸುಮಾರು 10 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಪೊಲೀಸ್ ಇನ್ಸ್​​ಪೆಕ್ಟರ್ ಒಬ್ಬರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಬೆಂಗಳೂರಿನ ಹೈಕೋರ್ಟ್ ಪೀಠ ರದ್ದುಪಡಿಸಿದೆ. ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ಪ್ರಕರಣ ರದ್ದು ಕೋರಿ ಪೊಲೀಸ್ ಇನ್ಸ್​ಪೆಕ್ಟರ್ ವೈ.ಗಂಗಿರೆಡ್ಡಿ,

ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್, ಆರೋಪಿಯಾಗಿರುವ ಪೊಲೀಸ್ ಇನ್ಸ್​ಪೆಕ್ಟರ್ ವಿರುದ್ಧ ಲಂಚ ಆರೋಪದಲ್ಲಿ ತನಿಖೆ ಪ್ರಾರಂಭಿಸಲಾಗಿದ್ದು, ಮನೆಯ ಮೇಲೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಸಂಗ್ರಹಿಸಲಾಗಿತ್ತು. ಈ ಆಧಾರದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖಾಧಿಕಾರಿಗಳು ವ್ಯಾಪ್ತಿ ಮೀರಿ ತನಿಖೆ ನಡೆಸಿದ್ದಾರೆ ಎಂದು ತಿಳಿಸಿ ಪ್ರಕರಣ ರದ್ದುಪಡಿಸಿದರು.