ಬೆಂಗಳೂರು: ಡಿಜೆಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣೆ ಮೇಲೆ ನಡೆದಿದ್ದ ದಾಳಿಯಲ್ಲಿ ಪ್ರಕರಣ ದಾಖಲಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಸತ್ಯಾಂಶ, ಕಾನೂನಾತ್ಮಕ ಅಂಶಗಳಿದ್ದರೆ ಮಾತ್ರ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಗಲಭೆ ಆರೋಪಿಗಳ ಕೇಸ್ ವಾಪಸ್ ಬಗ್ಗೆ ಸಚಿವ ಸಂಪುಟ ಉಪಸಮತಿ ವರದಿ ನೀಡುತ್ತೆ. ನಂತರ ಸಚಿವ ಸಂಪುಟದಲ್ಲಿ ತೀರ್ಮಾನವಾಗುತ್ತೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯವರು ಯಾಕೆ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ ಎಂದು ಕಾಣಿಸುತ್ತದೆ. ಹೀಗಾಗಿ ಸಣ್ಣ ಸಣ್ಣ ವಿಷಯಗಳಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬರದ ಬಗ್ಗೆ ಪ್ರವಾಹದ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.
ಕರ್ನಾಟಕದ(Karnataka) ವಿವಿಧೆಡೆ ಪ್ರತಿಭಟನೆ, ಗಲಭೆ(violence)) ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ (Students) ವಿರುದ್ಧದ ಕೇಸ್ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್(Tanveer Sait) , ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)