ಬೆಂಗಳೂರು ;– ಸಿಎಂ ಸಿದ್ದರಾಮಯ್ಯ ಅವರು ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿದರು. ಈ ವೇಳೆ ಮಾತನಾಡಿದ ಅವರು, ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಲು ಯತ್ನಿಸುತ್ತಿದ್ದೇವೆ ಎಂದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಸಲಾಗುತ್ತದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ, ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.