ನವದೆಹಲಿ: ಆರ್ ಆರ್ ಆರ್ ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದ್ದು, ಚಿತ್ರ ತಂಡ ಪ್ರಶಸ್ತಿ ಜತೆ ಭಾರತಕ್ಕೆ ಮರಳಿದೆ. RRR ಚಿತ್ರದ ನಟ ರಾಮ್ ಚರಣ್ ಹಾಗೂ ಅವರ ತಂದೆ ಚಿರಂಜೀವಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.ಅಮಿತ್ ಶಾ ಅವರು ರಾಮ್ ಚರಣ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಅವರಿಗೆ ರೇಷ್ಮೆ ಶಾಲು ಹೊದಿಸಿ ಸನ್ಮಾನಿಸಿದರು.
ರಾಮ್ ಚರಣ್ ಅವರು ಶೀಘ್ರದಲ್ಲೇ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.ಎಸ್ ಎಸ್ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ತೆಲುಗು ಸಿನಿಮಾದ ಜನಪ್ರಿಯ ‘ನಾಟು ನಾಟು’ ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ.