Browsing: ರಾಷ್ಟ್ರೀಯ

ತಿರುವನಂತಪುರಂ: ಪ್ರವಾಸಿ ದೋಣಿ (Tourist Boat) ಮುಳುಗಡೆಯಾಗಿ 22 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಕೇರಳ ಸರ್ಕಾರ (Kerala…

ಲಕ್ನೋ: ಕಬಾಬ್‌ ರುಚಿಯಾಗಿಲ್ಲ ಎಂದು ಕಬಾಬ್‌ ತಯಾರಿಸಿದ ವ್ಯಕ್ತಿಯನ್ನೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ  ರಾತ್ರಿ ಉತ್ತರ ಪ್ರದೇಶದ ಪ್ರೇಮ್‌ ನಗರದಲ್ಲಿ ನಡೆದಿದೆ. ಐಷಾರಾಮಿ ಕಾರಿನಲ್ಲಿ ಬಂದ, ಕುಡಿದ…

ನವದೆಹಲಿ: ಅಂತಾರಾಷ್ಟ್ರೀಯವಾಗಿ ಖಾದ್ಯ ತೈಲಗಳ ಬೆಲೆ ಕಡಿಮೆಯಾಗಿರುವುದರಿಂದ ಗ್ರಾಹಕರ ಹಿತದೃಷ್ಟಿಯಿಂದ ದೇಶೀಯ ವಾಗಿಯೂ ಬೆಲೆ ಇಳಿಕೆ ಮಾಡುವಂತೆ ಖಾದ್ಯತೈಲ (edible oils) ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.…

ಮಲಪ್ಪುರಂ:  ಯುವತಿಗೆ ಇರಿದ ಯುವಕನೋರ್ವ ಬಳಿಕ ತನ್ನ ಕತ್ತನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಘಾತಕಾರಿ ಘಟನೆ ಕೇರಳದ ಮಲಪ್ಪುರಂನ ತಿರುರಂಗಡಿ ಎಂಬಲ್ಲಿ ನಡೆದಿದೆ.  ರಾತ್ರಿ 11 ಗಂಟೆ…

ಮುಂಬೈ : ಮಹಾರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಭಾಯಂದರ್‌ ಪಶ್ಚಿಮದಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಬಯಸಿದ್ದರಿಂದ ಈ ಅಪರಾಧ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ. ಭಾಯಂದರ್ ವೆಸ್ಟ್‌ನ 60 ಅಡಿ ರಸ್ತೆಯಲ್ಲಿರುವ ಶಕ್ತಿ ಜ್ಯುವೆಲರ್ಸ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. “ಬಾಲಕ ಅಂಗಡಿಗೆ ಪ್ರವೇಶಿಸಿ ಚಿನ್ನದ ಬಿಸ್ಕತ್ತುಗಳನ್ನು ಮಾರಾಟ ಮಾಡಲು ಬಯಸುವುದಾಗಿ ಆಭರಣ ವ್ಯಾಪಾರಿಗೆ ತಿಳಿಸಿದನು. ಆಭರಣ ವ್ಯಾಪಾರಿ ಅವುಗಳನ್ನು ಖರೀದಿಸಲು ನಿರಾಕರಿಸಿದನು ಮತ್ತು ಹುಡುಗನನ್ನು ಜ್ಯುವೆಲ್ಲರಿ ಅಂಗಡಿಯಿಂದ ಹೊರಗೆ ಹೋಗುವಂತೆ ಹೇಳಿದನು. ಕೆಲವು ನಿಮಿಷಗಳ ನಂತರ, ಹುಡುಗ ಮತ್ತೆ ಅಂಗಡಿಯನ್ನು ಪ್ರವೇಶಿಸಿದ್ದು, ಈ ಬಾರಿ ಪ್ಲಾಸ್ಟಿಕ್‌ ಗನ್‌ ಹಿಡಿದಿದ್ದನು ಎಂದು ಭಾಯಂದರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮುಕುಟರಾವ್ ಪಾಟೀಲ್ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ನಿಜವಾದ ಗನ್ ಎಂದು ನಂಬಿಸಿ ಆಭರಣ ವ್ಯಾಪಾರಿಯನ್ನು ಆತ ಮೂರ್ಖರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದಾನೆ ಮತ್ತು ಆಭರಣ ಅಂಗಡಿಯನ್ನು ಲೂಟಿ ಮಾಡಿದ್ದಾನೆ. ಆದರೆ, ಲೂಟಿಯೊಂದಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಕೆಲ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅವರು ಆರೋಪಿ ಬಾಲಕನನ್ನು ನಮಗೆ ಒಪ್ಪಿಸಿದರು. ಕದ್ದ ಚಿನ್ನಾಭರಣಗಳಲ್ಲದೆ, ಆಟಿಕೆ ಪ್ಲಾಸ್ಟಿಕ್ ಗನ್ ಅನ್ನು ಸಹ ಆತನಿಂದ ವಶಪಡಿಸಿಕೊಂಡಿದ್ದೇವೆ ಎಂದೂ ಪೊಲೀಸ್‌ ಅಧಿಕಾರಿ ಹೇಳಿದ್ದಾರೆ. ಆರೋಪಿಯು ಎಸ್‌ಎಸ್‌ಸಿ ವಿದ್ಯಾರ್ಥಿಯಾಗಿದ್ದು, ಭಾಯಂದರ್ ನಿವಾಸಿಯಾಗಿದ್ದಾನೆ. ಬಾಲಕನ ತಂದೆ ಟೀ ಅಂಗಡಿ ನಡೆಸುತ್ತಿದ್ದರೆ, ತಾಯಿ ಗೃಹಿಣಿ. ಬಾಲಕ ತನ್ನ ತಂದೆಯ ಡಿಮ್ಯಾಟ್ ಖಾತೆಯನ್ನು ನೋಡಿಕೊಳ್ಳುತ್ತಿದ್ದ ಹಾಗೂ ಅದರಿಂದ ಉತ್ತಮ ಆದಾಯವನ್ನು ಗಳಿಸುತ್ತಿದ್ದನು, ಆದರೆ ಹೆಚ್ಚಿನ ಹಣದ ಅಗತ್ಯವಿದೆ ಎಂದು ಹೇಳಿದ್ದು, ಈ ಹಿನ್ನೆಲೆ ಈ ಕೃತ್ಯಕ್ಕೆ ಕೈ ಹಾಕಿದ್ದಾಗಿಯೂ ಬಾಲಕ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. “ಅವನು ಶ್ರೀಮಂತ ವ್ಯಕ್ತಿಯಾಗಲು ಮತ್ತು ಷೇರು ಮಾರುಕಟ್ಟೆಯಿಂದ ಹೆಚ್ಚು ಹಣವನ್ನು ಗಳಿಸಲು ಬಯಸಿದ್ದ” ಎಂದು ಹಿರಿಯ ಪೊಲೀಸ್‌ ಅಧಿಕಾರಿ  ಮುಕುಟರಾವ್ ಪಾಟೀಲ್ ಹೇಳಿದರು.

ನವದೆಹಲಿ: ಛತ್ತೀಸ್‌ಗಢದ ಕಾಂಗ್ರೆಸ್‌ ನಾಯಕರೊಬ್ಬರ ಸೋದರ ಮತ್ತು ಹಿರಿಯ ಐಎಎಸ್‌ ಅಧಿಕಾರಿ ಸೇರಿಕೊಂಡು ಮದ್ಯ ಮಾರಾಟದಲ್ಲಿ ಭಾರಿ ಅಕ್ರಮ ಎಸಗುವ ಮೂಲಕ ರಾಜ್ಯದ ಬೊಕ್ಕಸಕ್ಕೆ 4 ವರ್ಷಗಳಲ್ಲಿ 2000 ಕೋಟಿ ರೂ ವಂಚಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐಎಎಸ್‌ ಅಧಿಕಾರಿ ಅನಿಲ್‌ ಟುಟೇಜ್‌ ಎಂಬಾತನನ್ನು ಈ ಹಿಂದೆಯೇ ಬಂಧಿಸಿದ್ದ ಜಾರಿ ನಿರ್ದೇಶನಾಲಯ, ಇದೀಗ ಅನ್ವರ್‌ ಧೇಬರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಇಬ್ಬರೂ ಹೀಗೆ ಅಕ್ರಮವಾಗಿ ಸಂಗ್ರಹಿಸಿದ ಹಣವನ್ನು ರಾಜ್ಯದಲ್ಲಿ ಚುನಾವಣೆ ವೆಚ್ಚಕ್ಕೂ ಬಳಸಲಾಗಿತ್ತು. ಇದರಲ್ಲಿ ಸಾಕಷ್ಟು ಜನ ಪಾಲು ಹಂಚಿಕೊಂಡಿದ್ದಾರೆ. ಇದರ ಹಿಂದೆ ದೊಡ್ಡ ಜಾಲವೇ ಭಾಗಿಯಾಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿರುವ ಕಾರಣ, ಮುಂದಿನ ದಿನಗಳಲ್ಲಿ ಈ ಹಗರಣ ಇನ್ನಷ್ಟು ರಾಜಕೀಯ ನಾಯಕರ ಹೆಸರನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ. ಏನಿದು ಹಗರಣ?: ಛತ್ತೀಸ್‌ಗಢದಲ್ಲಿ ಖಾಸಗಿ ಮದ್ಯದಂಗಡಿಗೆ ಅನುಮತಿ ಇಲ್ಲ. ಇರುವ 800 ಅಂಗಡಿಗಳು ಸರ್ಕಾರದ ಸಿಎಸ್‌ಎಂಸಿಎಲ್‌ ನಿಗಮಕ್ಕೆ ಸೇರಿವೆ. ಈ ನಿಗಮ ಮಾತ್ರ ಮದ್ಯ ಮಾರಾಟದ ಉಸ್ತುವಾರಿ ಹೊಂದಿದೆ. ಆದರೆ ಈ ಅಂಗಡಿಗಳಲ್ಲಿ ಅಧಿಕೃತದ ಮದ್ಯದ ಜತೆಗೆ ದೇಶೀ ನಿರ್ಮಿತ ಅಕ್ರಮ ಮದ್ಯವನ್ನು ಅನ್ವರ್‌ ಧೇಬರ್‌ ಮಾರಾಟ ಮಾಡಿಸಿದ್ದಾನೆ. ಈ ರೀತಿ ಮಾರಾಟವಾದ ಮದ್ಯದಲ್ಲಿ 1 ರೂ. ಕೂಡ ರಾಜ್ಯದ ಖಜಾನೆಗೆ ಹೋಗಿಲ್ಲ. ಸಂಪೂರ್ಣ ಆದಾಯವನ್ನು ಧೇಬರ್‌ನ ಜಾಲವೇ ಪಡೆದಿದೆ. 2019ರಿಂದ 2022ರ ನಡುವೆ, ಈ ರೀತಿಯ ಅಕ್ರಮ ಮಾರಾಟವು ರಾಜ್ಯದಲ್ಲಿನ ಒಟ್ಟು ಮದ್ಯದ ಮಾರಾಟದ ಶೇ.30-40ರ ಷ್ಟಿತ್ತು ಮತ್ತು 1,200 – 1,500 ಕೋಟಿ ರೂ. ಅಕ್ರಮ ಲಾಭವನ್ನು ಗಳಿಸಿದೆ ಎಂದು ತನಿಖೆ ವೇಳೆ ಕಂಡುಬಂದಿದೆ. ಇದರ ಜೊತೆಗೆ, ಮಳಿಗೆಗಳಿಗೆ ಅಧಿಕೃತವಾಗಿ ಮದ್ಯ ಸರಬರಾಜು ಮಾಡುವ ಸಂಸ್ಥೆಗಳ ಜೊತೆಗೂ ಅನ್ವರ್‌ ಡೀಲ್‌ ಕುದುರಿಸಿದ್ದ. ಅವರಿಂದ ಪ್ರತಿ ಕೇಸ್‌ಗೆ 75-150 ರೂ. ವಸೂಲಿ ಮಾಡುತ್ತಿದ್ದ. ಅಂದರೆ ಮಳಿಗೆಗಳ ಮೂಲಕ ಮಾರಾಟವಾಗುವ ಪ್ರತಿ ಬಾಟಲ್‌ನಿಂದಲೂ ಹಣ ಸಂಗ್ರಹಿಸಿದ್ದಾನೆ. ವಿತರಣೆ ಮತ್ತು ಪೂರೈಕೆಯ ಪ್ರತಿ ಹಂತದಲ್ಲೂ ತನ್ನ ಬಂಟರನ್ನು ನೇಮಿಸಿಕೊಂಡಿದ್ದ ಅನ್ವರ್‌ ಖಾಸಗಿ ಡಿಸ್ಟಿಲರ್‌ಗಳು, ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಬಕಾರಿ ಅಧಿಕಾರಿಗಳು, ಗಾಜಿನ ಬಾಟಲಿ ತಯಾರಕರು, ಹಾಲೋಗ್ರಾಮ್‌ ತಯಾರಕರು, ನಗದು ಸಂಗ್ರಹ ಮಾರಾಟಗಾರರು ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಯಂತ್ರಿಸುತ್ತಿದ್ದ ಎಂದು ಇ.ಡಿ. ಹೇಳಿದೆ.

ನವದೆಹಲಿ : ಲೇಡಿ ಬ್ಲ್ಯಾಕ್‌ಮೇಲರ್‌ ಅರ್ಚನಾ ನಾಗ್‌ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿದ್ದ ಶ್ರದ್ಧಾಂಜಲಿ ಬೆಹರಾಗೆ ಕೋರ್ಟ್‌ ಶಾಕ್‌ ನೀಡಿದೆ.ವಿ ಶೇಷ ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯವು ವೈಯಕ್ತಿಕವಾಗಿ ತನ್ನ ಮುಂದೆ ಹಾಜರಾಗುವಂತೆ ಶ್ರದ್ಧಾಂಜಲಿಗೆ ಸೂಚನೆ ನೀಡಿದೆ. ತನ್ನ ವಕೀಲರ ಮೂಲಕ ನ್ಯಾಯಾಲಯದ…

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ನಾಯಿಮರಿಯನ್ನು (Puppy) ಹಿಡಿದುಕೊಂಡು, ಟ್ರೆಡ್‍ಮಿಲ್‍ನಲ್ಲಿ (Treadmill) ನಡೆಯುವ ವೀಡಿಯೋವೊಂದು ಹರಿದಾಡುತ್ತಿದೆ. ಈ ಬಗ್ಗೆ ಮಮತಾ ಬ್ಯಾನರ್ಜಿ ಅವರೇ…

ರುವನಂತಪುರಂ: ಪ್ರವಾಸಿ ದೋಣಿ (Tourist Boat) ಮುಳುಗಿ ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ಘಟನೆ ಕೇರಳದ (Kerala) ಮಲಪ್ಪುರಂನಲ್ಲಿ (Malappuram) ನಡೆದಿದೆ. ಕೇರಳದ ಮಲಪ್ಪುರಂನ ತನೂರ್‌ ಪ್ರದೇಶದಲ್ಲಿ…

ತೆಲಂಗಾಣ:  ತೆಲಂಗಾಣದಲ್ಲೊಬ್ಬ ಡಾಕ್ಟರ್‌ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿರುವ ಘಟನೆ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದು ಮಗುವಿನ ತಲೆಗೆ…