ಟೆಲ್‍ಅವಿವ್: ಗಾಜಾ ಆಸ್ಪತ್ರೆಯಲ್ಲಿ (Gaza Hospital) ಸರಿಸುಮಾರು 1,000 ಜನರನ್ನು ಮತ್ತು ರೋಗಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡ ಹಮಾಸ್ ನ ಹಿರಿಯ ಕಮಾಂಡರ್‍ನನ್ನು ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿರುವುದಾಗಿ ಇಸ್ರೇಲ್…
Browsing: ಅಂತರಾಷ್ಟ್ರೀಯ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಹಾಗೂ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ನಾಲ್ಕು ವರ್ಷಗಳ ಹಿಂದೆ ತಮ್ಮ ಮರಣದಂಡನೆ ಶಿಕ್ಷೆ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು, ಅವರು…
ರಿಯಾಧ್: ” ಗಾಜಾ ನಗರದಲ್ಲಿ ಇಸ್ರೇಲ್ ಸೇನೆಯು ಆತ್ಮರಕ್ಷಣೆ ನೆಪದಲ್ಲಿ ನಡೆಸುತ್ತಿರುವ ಪ್ಯಾಲೆಸ್ತೀನಿ ನಾಗರಿಕರ ಹತ್ಯಾಕಾಂಡವನ್ನು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳು ತೀವ್ರವಾಗಿ ಖಂಡಿಸಬೇಕು. ಈ ಕೂಡಲೇ ಇಸ್ರೇಲ್ ಸೇನೆಗೆ…
ಐಸ್‍ಲ್ಯಾಂಡ್: ಸುಮಾರು 800 ಬಾರಿ ಭೂಮಿ ಕಂಪಿಸಿದ್ದರಿಂದ (Earthquake) ಐಸ್‍ಲ್ಯಾಂಡ್ʼನಲ್ಲಿ (Iceland) ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ (Emergency) ಘೋಷಿಸಲಾಗಿದೆ. ಶುಕ್ರವಾರ ನಸುಕಿನ ಜಾವ 2 ಗಂಟೆಗೆ ಸರಣಿ…
ವಾಷಿಂಗ್ಟನ್: ಅಮೆರಿಕದ (America) ಯುದ್ಧ ವಿಮಾನಗಳು ನಡೆಸಿದ ದಾಳಿಯಿಂದಾಗಿ ಸಿರಿಯಾದಲ್ಲಿ (Syria) ಇರಾನ್ (Iran) ಬೆಂಬಲಿತ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದ 9 ಮಂದಿ ಹತ್ಯೆಯಾಗಿದ್ದಾರೆ. ಅಮೆರಿಕ ಸಿಬ್ಬಂದಿ ಮೇಲಿನ…
ವಾಷಿಂಗ್ಟನ್: ನಾನು ಭಾರತವನ್ನು ಪ್ರೀತಿಸುತ್ತೇನೆ. ಪ್ರಧಾನಿ ಮೋದಿ ಭಾರತೀಯ ನಾಗರಿಕರ ಪ್ರಗತಿಯ ಅತ್ಯುತ್ತಮ ನಾಯಕ ಎಂದು ಅಮೆರಿಕ ಗಾಯಕ ಮತ್ತು ಆಫ್ರಿಕನ್-ಅಮೇರಿಕನ್ ನಟಿ ಮೇರಿ ಮಿಲ್‌ಬೆನ್ (Mary Millben)…
ಲಂಡನ್: ಬ್ರಿಟನ್ ಪ್ರಧಾನ ಮಂತ್ರಿ ಹಾಗೂ ಭಾರತದ ಅಳಿಯ ರಿಷಿ ಸುನಕ್ (Rishi Sunak) ಅವರು ಡೌನಿಂಗ್ ಸ್ಟ್ರೀಟ್‌ಗೆ ಹಿಂದೂ ಸಮುದಾಯದ ಅತಿಥಿಗಳನ್ನು ಸ್ವಾಗತಿಸಿ ದೀಪಾವಳಿ (Diwali) ಹಬ್ಬ…
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾದಲ್ಲಿ ಅಪರಿಚಿತರು ಲಷ್ಕರ್-ಎ-ತೊಯ್ಬಾ ಕಮಾಂಡರ್ (Lashkar e Taiba Terrorist) ಅಕ್ರಮ್ ಘಾಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಒಂದು ವಾರದ ಅವಧಿಯಲ್ಲಿ ನಡೆದ…
ಮಾಲ್ಡೀವ್ಸ್: ಮಾಲ್ಡೀವ್ಸ್ ದೇಶವು ತನ್ನ ದೇಶದಲ್ಲಿ ಭಾರತದ ಮಿಲಿಟರಿ ಉಪಸ್ಥಿತಿಯನ್ನು ತೆಗೆದುಹಾಕುವ ನಿಟ್ಟಿನಲ್ಲಿ ಮಾತುಕತೆಗಳನ್ನು ಪ್ರಾರಂಭಿಸಿದೆ ಎಂದು ಅಧ್ಯಕ್ಷ-ಚುನಾಯಿತ ಮೊಹಮ್ಮದ್ ಮುಯಿಝು ಬ್ಲೂಮ್‌ಬರ್ಗ್ ನ್ಯೂಸ್ ಪ್ರಕಟಿಸಿದ ಸಂದರ್ಶನದಲ್ಲಿ ಹೇಳಿದ್ದಾರೆ.…
ನ್ಯೂಯಾರ್ಕ್: ಹಂದಿಯ ಹೃದಯ ಕಸಿ ಪಡೆದ ವ್ಯಕ್ತಿಯೊಬ್ಬರು ಶಸ್ತ್ರಚಿಕಿತ್ಸೆಯ 40 ದಿನಗಳ ನಂತರ ಸಾವಿಗೀಡಾಗಿದ್ದಾರೆ. ಇವರು ವಿಶ್ವದಲ್ಲೇ ಹಂದಿ ಹೃದಯ ಕಸಿಗೊಳಗಾಗಿದ್ದ 2ನೇ ವ್ಯಕ್ತಿಯಾಗಿದ್ದರು. 58 ವರ್ಷದ ಲಾರೆನ್ಸ್ ಫೌಸೆಟ್ಟೆ ಮೃತವ್ಯಕ್ತಿ. ಹೃದಯಾಘಾತ ದಿಂದ ಅವರು ಸಾವನ್ನಪ್ಪಿದ್ದು, ಅವರಿಗೆ ಅತ್ಯಂತ ಪ್ರಾಯೋಗಿಕ ಶಸ್ತ್ರಚಿಕಿತ್ಸೆಯ ಮೂಲಕ 40 ದಿನಗಳ ಹಿಂದಷ್ಟೇ ಹಂದಿಯ ಹೃದಯ ಅಳವಡಿಸಲಾಗಿತ್ತು. ಸೆಪ್ಟೆಂಬರ್ 20 ರಂದು ಅವರಿಗೆ ಹಂದಿಯ ಹೃದಯ ಅಳವಡಿಸಲಾಗಿತ್ತು. ಮೇರಿಲ್ಯಾಂಡ್ ಸ್ಕೂಲ್ ಆಫ್ ಮೆಡಿಸಿನ್ ವಿಶ್ವವಿದ್ಯಾಲಯದ ಪ್ರಕಾರ, ಅವರಿಗೆ ಮೊದಲ ತಿಂಗಳಲ್ಲಿ ಹೃದಯವೂ ಆರೋಗ್ಯಕರವಾಗಿ ಕಾರ್ಯನಿರ್ವಹಿಸಿತ್ತು. ಆದರೆ ಇತ್ತೀಚೆಗೆ ಅದು ಸರಿಯಾಗಿ ಸ್ಪಂದಿಸದೇ ನಿರಾಕರಿಸುವ ಲಕ್ಷಣವನ್ನು ತೋರಿಸುತ್ತಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರು ಸುಮಾರು ಆರು ವಾರಗಳ ಕಾಲ ಬದುಕಿದ್ದು ಆಕ್ಟೋಬರ್ 30 ರಂದು ಸಾವನ್ನಪ್ಪಿದ್ದಾರೆ ಎಂದು ಮೇರಿಲ್ಯಾಂಡ್ ಸ್ಕೂಲ್ ಆಫ್ ಮೆಡಿಸಿನ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ. ಹಂದಿಯ ಹೃದಯ ಅಳವಡಿಸಿದ ನಂತರ ಫೌಸೆಟ್ ಆರೋಗ್ಯ ಸುಧಾರಿಸಿತ್ತು, ಅವರು ಕುಟುಂಬ ಸದಸ್ಯರೊಂದಿಗೆ ಖುಷಿಯಿಂದ ಸಮಯ ಕಳೆದಿದ್ದರು. ಜೊತೆಗೆ ಪತ್ನಿ ಜೊತೆ ಇಸ್ಪೀಟ್‌ನ್ನು ಆಡುತ್ತಿದ್ದರು. ಆದರೆ ಇತ್ತೀಚೆಗೆ ಅವರ ಹೃದಯವು ನಿರಾಕರಣೆಯ ಆರಂಭಿಕ ಲಕ್ಷಣಗಳನ್ನು ತೋರಿಸಲು ಪ್ರಾರಂಭಿಸಿತು. ಇದು ಬಹಳ ಸವಾಲಿನ ಪ್ರಕರಣವಾಗಿದ್ದರೂ ಸಹ ವೈದ್ಯಕೀಯ ತಂಡ ಹೆಚ್ಚಿನ ಮುತುರ್ವಜಿ ವಹಿಸಿ ಅವರಿಗೆ ಚಿಕಿತ್ಸೆ ನೀಡಿದರಾದರೂ ಅವರು ಪ್ರಾಣ ಬಿಟ್ಟಿದ್ದಾರೆ.