Browsing: ಜಿಲ್ಲೆ

ಕಲಬುರಗಿ: ಕಾಂಗ್ರೆಸ್​​ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿ ಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳುವ ಮೂಲಕ…

ಮೈಸೂರು: ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗೆ ವಿಪಕ್ಷಗಳ ಟೀಕೆ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಸಮಾನತೆ ವಿರೋಧಿಸಿದವರೇ ಶಕ್ತಿ ಯೋಜನೆ ವಿರೋಧಿಸ್ತಿದ್ದಾರೆ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಡಾ.H​​.C.ಮಹದೇವಪ್ಪ…

ಚಿತ್ರದುರ್ಗ: ಲಾರಿಗೆ ಕಾರು ಹಿಂಬದಿಯಿಂದ  ಡಿಕ್ಕಿಯಾಗಿ ಪರಿಣಾಮ  ಮೂರು ತಿಂಗಳ ಕಂದಮ್ಮ ಸೇರಿದಂತೆ ಮೂವರು  ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ‌ ಘಟನೆಯು…

ಶಿವಮೊಗ್ಗ: ಜಿಲ್ಲೆಯ ಸಾಗರದ (Sagara) ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಕಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥ ಮಂಜಪ್ಪ (Manjappa) ಎಂಬುವರ ವಿರುದ್ದ ಪೊಲೀಸರು ಪೋಕ್ಸೋ…

ತುಮಕೂರು: ರಾಜ್ಯದಲ್ಲಿ ವಿದ್ಯುತ್​ ದರ ಏರಿಕೆ (power tariff) ಮಾಡಿದ್ದು ಹಿಂದಿನ ಸರ್ಕಾರ. ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹೆಚ್ಚಾಗಿ ವಿದ್ಯುತ್ ಬಳಸಿದ್ದರೆ ಹಣ ಕಟ್ಟಬೇಕು ಎಂದು ಗೃಹ…

ಬೆಳಗಾವಿ: ಲೋಕಸಭೆ ಚುನಾವಣೆವರೆಗೆ (Loka Sabha Elections 2024) ಮಾತ್ರ ಗುದ್ದಾಡಿಕೊಂಡು ಐದು ಗ್ಯಾರಂಟಿ (Congress Guarantees) ಯೋಜನೆಗಳನ್ನು ಮುಂದುವರಿಸುತ್ತಾರೆ. ನಂತರ ಕಾಂಗ್ರೆಸ್​​ನವರು ಜನರಿಗೆ ಮೋಸ ಮಾಡುತ್ತಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದ್ದಾರೆ. ಜಿಲ್ಲೆಯ ಅಥಣಿಯಲ್ಲಿ ಕಾರ್ಯಕರ್ತರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳನ್ನು ಮುಂದುವರಿಸಿದರೆ ಅಭಿವೃದ್ಧಿಕಾರ್ಯ ಬಂದ್ ಮಾಡಬೇಕಾಗುತ್ತದೆ. ಇದರಿಂದ ಕರ್ನಾಟಕದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು. ನಾವು ಯಾರೂ ಗ್ಯಾರಂಟಿಗಳ ಬಗ್ಗೆ ಮಾತನಾಡಬಾರದು ಎಂದು ಬಿಜೆಪಿ ಮುಖಂಡರು, ನಾಯಕರಲ್ಲಿ ನಾನು ಮನವಿ ಮಾಡುತ್ತೇನೆ ಎಂದು ಹೇಳಿದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ಕೊಟ್ಟಿದ್ದಾರೆ, ಜನ ಮತ ಹಾಕಿದ್ದಾರೆ, ಅವರಿಗೂ ಇದೆ, ನಮಗೂ ಇದೆ. ಆಮೇಲೆ ತಪ್ಪು ಮಾಡಿದರೆ ಮಾತಾಡೋಣ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಎರಡು ಸ್ಥಾನಕ್ಕೆ ಸೀಮಿತ ಮಾಡುತ್ತೇವೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಆಗಲಿ ಆಗಲಿ ಬಹಳ ಸಂತೋಷ ಬಹಳ ಸಂತೋಷ ಎಂದರು.

ಕಾರವಾರ: ಅರಬ್ಬೀ ಸಮುದ್ರದಲ್ಲಿ ಬಿಪೋರ್‌ ಜಾಯ್ ಚಂಡಮಾರುತ (Biporjoy Cyclone) ಅಬ್ಬರ ಜೋರಾದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ (Uttar Kannada) ರವೀಂದ್ರನಾಥ ಟ್ಯಾಗೋರ್ ಬೀಚ್​​  (Rabindranath Tagore Beach) ಕಡಲ್ಕೊರೆತ (Sea Erosion) ಉಂಟಾಗಿದೆ. ಗಾಳಿಯ ರಭಸಕ್ಕೆ 3 ರಿಂದ 4 ಮೀಟರ್ ಎತ್ತರದಷ್ಟು ಅಲೆಗಳು ಏಳುತ್ತಿದ್ದು, ಕಡಲತೀರಕ್ಕೆ ಅಪ್ಪಳಿಸುತ್ತಿವೆ. ಅಲೆಗಳ ಹೊಡೆತಕ್ಕೆ ತೀರಪ್ರದೇಶದ ಮರಳು ಕೊಚ್ಚಿ ಹೋಗುತ್ತಿದೆ. ಚಂಡಮಾರುತದಿಂದ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಇನ್ನು ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನು ಚಂಡಮಾರುತ ಪರಿಣಾಮ ಕರಾವಳಿಯಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಕಡಲಕೊರೆತ ಹಿನ್ನಲೆ ಮೀನುಗಾರರು ದೋಣಿಗಳನ್ನ ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ಅಲೆಗಳ ಹೊಡೆತಕ್ಕೆ ಬೋಟ್‌ಗಳು ಸಿಲುಕದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಜಿಲ್ಲಾಡಳಿತ ಕಡಲತೀರದ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ಸೂಚಿಸಿದೆ.

ದಾವಣಗೆರೆ: ಮಹಿಳೆಯರು ಅಂದರೆ ಮಹಿಳೆಯರು, ಮತ್ಯಾಕೆ ಆ ಚೀಟಿ, ಈ ಚೀಟಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಪ್ರಶ್ನಿಸಿದ್ದಾರೆ. ಶಕ್ತಿ ಯೋಜನೆಗೆ ಚಾಲನೆ…

ರಾಯಚೂರು: ರಾಯಚೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ದೇವದುರ್ಗ ತಾಲೂಕಿನ ಗೆಜ್ಜೆಬಾವಿದೊಡ್ಡಿ ಗ್ರಾಮದಲ್ಲಿ ಸಿಡಿಲು ಬಡಿದು ಮೌನೇಶ (35) ಎಂಬವರು ಸಾವನ್ನಪ್ಪಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ…

ಧಾರವಾಡ: ಮಹಿಳೆಯರ ಉಚಿತ ಬಸ್ ಪ್ರಯಾಣದ ನಾರಿ `ಶಕ್ತಿ’ ಯೋಜನೆಯನ್ನ (Shakti Scheme) ರಾಜ್ಯ ಸರ್ಕಾರ ಭಾನುವಾರ (ಜೂನ್ 11) ದಿಂದ ಜಾರಿಗೊಳಿಸಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ…