Browsing: ರಾಷ್ಟ್ರೀಯ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A)ದಲ್ಲಿ ತಾನು ಯಾವುದೇ ಹುದ್ದೆಯನ್ನು ಬಯಸುವುದಿಲ್ಲ ಎಂದು ಬಿಹಾರದ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಪುನರುಚ್ಚರಿಸಿದ್ದಾರೆ. ನಾನು ಏನನ್ನೂ ಬಯಸುವುದಿಲ್ಲ. ಇದನ್ನು ನಾನು ನಿಮಗೆ ಮತ್ತೆ ಮತ್ತೆ ಹೇಳುತ್ತಿದ್ದೇನೆ. ನನಗೆ ಅಂತಹ ಆಸೆ ಇಲ್ಲ. ನಾನು ಎಲ್ಲರನ್ನೂ ಒಗ್ಗೂಡಿಸಲು ಬಯಸುತ್ತೇನೆ ಎಂದು ಪಾಟ್ನಾದಲ್ಲಿ ತಮ್ಮ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಮ್ಮುಖದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್ ಹೇಳಿದ್ದಾರೆ. ಸಂಚಾಲಕನ ಪಾತ್ರವನ್ನು ನೀಡಿದರೆ ಸ್ವೀಕರಿಸುತ್ತೀರಾ ಎಂದು ಕೇಳಿದಾಗ, ಹಮ್​​​ಕೊ ಕುಚ್ ನಹೀ ಬನ್ನಾ ಹೈ. ಹುಮಾರಿ ಕೋಯಿ ಇಚ್ಚಾ ನಹೀ ಹೈಂ. ದೂಸ್ರೆ ಲೋಗೋ ಕೋ ಬನಾಯಾ ಜಾಯೇಗಾ (ನನಗೆ ಏನೂ ಆಗಲು ಇಷ್ಟವಿಲ್ಲ. ನನಗೆ ಅಂತಹ ಯಾವುದೇ ಆಸೆ ಇಲ್ಲ. ಇತರರನ್ನು ಸಂಚಾಲಕರನ್ನಾಗಿ ಮಾಡಲಾಗುವುದು) ಎಂದು ಅವರು ಹೇಳಿದ್ದಾರೆ. ಪ್ರತಿಪಕ್ಷಗಳ ಒಗ್ಗಟ್ಟಿನ ಕ್ರಮದ ನೇತೃತ್ವ ವಹಿಸಿರುವ ಬಿಹಾರ ಮುಖ್ಯಮಂತ್ರಿ, ನನಗೆ ಯಾವುದೇ ವೈಯಕ್ತಿಕ ಮಹತ್ವಾಕಾಂಕ್ಷೆ ಇಲ್ಲ. ನಾನು ಪಕ್ಷಗಳನ್ನು ಒಗ್ಗೂಡಿಸಲು ಮಾತ್ರ ಬಯಸುತ್ತೇನೆ ಎಂದಿದ್ದಾರೆ. ಭಾರತ ನಿಜವಾಗಿಯೂ 1947 ರಲ್ಲಿ ಸ್ವತಂತ್ರವಾಗಲಿಲ್ಲ, ಆದರೆ ಜೆಪಿ ಚಳುವಳಿಯ ನಂತರ 1977 ರಲ್ಲಿ ಆಗಿದ್ದು ಎಂದು ಬಿಹಾರದ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿಯವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕುಮಾರ್, ಯಾರಾದರೂ ಹೇಳಿದರೆ ನಾನು ಯಾವುದಕ್ಕೂ ಗಮನ ಕೊಡುವುದಿಲ್ಲ. ಸ್ವಾತಂತ್ರ್ಯದ ಬಗ್ಗೆ ಅವರಿಗೆ ಗೊತ್ತಿಲ್ಲ ಎಂದಾದರೆ ಅವರು ಎಷ್ಟು ಅಪ್ರಸ್ತುತರು ಎಂಬುದನ್ನು ಅದು ತೋರಿಸುತ್ತದೆ ಎಂದಿದ್ದಾರೆ.

ವಡೋದರ: ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬರು (Drunk Woman)ಪೊಲೀಸರ ಮೇಲೆ ಹಲ್ಲೆ ನಡೆಸಿ, ಬೈದು ಕೂಗಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ  ವೈರಲ್ ಆಗಿದೆ. ವಡೋದರದಲ್ಲಿ (Vadodara)ಈ ರೀತಿ ಮದ್ಯ ಸೇವಿಸಿ ಅನುಚಿತವಾಗಿ ವರ್ತಿಸಿದ ಮಹಿಳೆಯನ್ನು ಬಂಧಿಸಲಾಗಿದೆ.  ಗುಜರಾತ್‌ನಲ್ಲಿ (Gujarat) ಮದ್ಯಪಾನ ನಿಷೇಧದ ನಂತರವೂ ಈಕೆಗೆ ಮದ್ಯ ಎಲ್ಲಿಂದ ಸಿಕ್ಕಿತು ಎಂಬುದು ಈಗ ಪ್ರಶ್ನೆಯಾಗಿದೆ. ಗುಜರಾತಿನಲ್ಲಿ ಮದ್ಯವನ್ನು ನಿಷೇಧಿಸಿದ ನಂತರವೂ ಅಲ್ಲಿ ಮದ್ಯ ಮಾರಾಟ ಮತ್ತು ಸೇವನೆ ನಡೆಯುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ವೈರಲ್ ಆಗಿರುವ ವಿಡಿಯೊದಲ್ಲಿ ಮಹಿಳೆ ರಸ್ತೆಯಲ್ಲಿ ಪೊಲೀಸರನ್ನು ನಿಂದಿಸಿ ಹೊಡೆಯಲು ಯತ್ನಿಸುತ್ತಿರುವುದನ್ನು ಕಾಣಬಹುದು. ಆಕೆಯನ್ನು ಮಹಿಳಾ ಪೇದೆಯೊಬ್ಬರು ತಡೆದಿದ್ದಾರೆ. ಆದರೂ ಆಕೆ ಪೊಲೀಸರ ಮೇಲೆ ದಾಳಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾಳೆ. ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಸಿಕ್ಕಿಬಿದ್ದಾಗ ಗಲಾಟೆ ಶುರುವಾಗಿತ್ತು. ಸದ್ಯ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ದೇಶಾದ್ಯಂತ…

ನವದೆಹಲಿ: ಇಸ್ರೋದ ಚಂದ್ರಯಾನ ಯೋಜನೆಯ ಬಳಿಕ ಸಂಸ್ಥೆಯು ಸೂರ್ಯ ಹಾಗೂ ಶುಕ್ರ ಗ್ರಹದತ್ತ ತೆರಳಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್…

ನವದೆಹಲಿ ;- ಚಂದ್ರಯಾನದ ಯಶಸ್ಸಿನಲ್ಲಿ ಮಹಿಳಾ ವಿಜ್ಞಾನಿಗಳ ಪಾತ್ರ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,(ಇಸ್ರೋ) ಯಶಸ್ವಿ ಚಂದ್ರಯಾನದಲ್ಲಿ ಅನೇಕ…

ಲಕ್ನೋ: ತನ್ನ ಸೊಸೆಯನ್ನು ಲೈಂಗಿಕ ದೌರ್ಜನ್ಯದಿಂದ ಕಾಪಾಡಲು ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ಉತ್ತರ ಪ್ರದೇಶದ  (Uttar Pradesh) ಬದೌನ್‍ನಲ್ಲಿ ನಡೆದಿದೆ. ತೇಜೇಂದರ್ ಸಿಂಗ್…

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (Lok Sabha Election) ರಾಹುಲ್ ಗಾಂಧಿ (Rahul Gandhi) ಕಾಂಗ್ರೆಸ್ (Congress) ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್…

ಲಕ್ನೋ: ಉತ್ತರಪ್ರದೇಶದ (Uttarpradesh) ಪಶು ಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಸೈನಿ (Dharampal Singh Saini ) ಅವರು ರೈಲು ಹತ್ತಲು ತಡವಾಯಿತು ಎಂದು ತಮ್ಮ ಕಾರನ್ನು ನೇರವಾಗಿ…

ನವದೆಹಲಿ:  ಡೆಲಿವರಿ ಬಾಯ್​​ಗೆ (delivery boy) ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ನಡೆದಿದೆ. ದ್ವಾರಕಾದ ಸೆಕ್ಟರ್ 23ರಲ್ಲಿ ಶುಕ್ರವಾರದಂದು ನಡೆದ ಈ ಘಟನೆ ತಡವಾಗಿ…

ನವದೆಹಲಿ: ಬಸ್‌ ಕಂಡಕ್ಟರ್ ನಿಂದ ಅತ್ಯಾಚಾರವಾಗಿದೆ ಎಂದು ಆರೋಪ ಕೇಲೀಬಂದಿದೆ. ಹೌದು ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಸಾರಿಗೆ ನಿಗಮದ…