Ind vs Ban.. ಭಾರತ ಎದುರಿನ ಟೆಸ್ಟ್ ಸರಣಿಗೆ ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಕಟ

ಸದ್ಯ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಇದಾಗುತ್ತಿದ್ದಂತೆಯೇ ಡಿಸೆಂಬರ್ 14ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಈ ಸರಣಿಗೆ 17 ಆಟಗಾರರನ್ನೊಳಗೊಂಡ ಬಲಿಷ್ಠ ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಕಟವಾಗಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಪ್ರಕಟಿಸಿದ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಮುಷ್ಫಿಕುರ್ ರಹೀಂ, ಯಾಸಿರ್ ಅಲಿ,  ಹಾಗೂ ಟಸ್ಕಿನ್ ಅಹಮ್ಮದ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಝಾಕೀರ್ ಹಸನ್ ಇದೇ ಮೊದಲ ಬಾರಿಗೆ ಬಾಂಗ್ಲಾದೇಶ ತಂಡದಲ್ಲಿ ಸ್ಥಾನ ಪಡೆಯುವಲ್ಲಿ […]

Continue Reading

ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಡೌಟ್..! ಈ ಆಟಗಾರ ಆಯ್ಕೆ

ಬಾಂಗ್ಲಾದೇಶ ವಿರುದ್ಧ 3ನೇ ಏಕದಿನ ಹಾಗೂ ಮೊದಲ ಟೆಸ್ಟ್‌ನಲ್ಲಿ ಭಾರತದ ನಾಯಕ ರೋಹಿತ್‌ ಶರ್ಮಾ ಆಡುವುದು ಅನುಮಾನವೆನಿಸಿದೆ. ಬಾಂಗ್ಲಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್‌ ಮಾಡುವಾಗ ಅವರು ಎಡಗೈ ಹೆಬ್ಬೆರಳಿನ ಗಾಯಕ್ಕೆ ತುತ್ತಾದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನ್‌ ಮಾಡಿಸಿ ಹೊಲಿಗೆ ಹಾಕಿಸಲಾಯಿತು. ಬಳಿಕ ರೋಹಿತ್‌ ಬ್ಯಾಟಿಂಗ್‌ಗಿಳಿಯಬೇಕಾದ ಅನಿವಾರ್ಯತೆ ಎದುರಾಯಿತು. ಹೀಗಾಗಿ ಗಾಯದ ಪ್ರಮಾಣ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ತಂಡದ ಮೂಲಗಳು ತಿಳಿಸಿವೆ. ಹೀಗಾಗಿ ಬಾಂಗ್ಲಾದೇಶ ಎದುರಿನ ಟೆಸ್ಟ್ ಸರಣಿಗೆ ಮೀಸಲು ಆಟಗಾರನಾಗಿ ಭಾರತ ‘ಎ‘ ತಂಡದ ನಾಯಕ ಅಭಿಮನ್ಯು ಈಶ್ವರನ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್‌ ಸರಣಿಯು ಡಿಸೆಂಬರ್ 14ರಿಂದ ಆರಂಭವಾಗಲಿದೆ. ಟೆಸ್ಟ್‌ ಸರಣಿಗೆ ರೋಹಿತ್ ಶರ್ಮಾ ಬಹುತೇಕ ಅಲಭ್ಯರಾಗುವ ಸಾಧ್ಯತೆಯಿದ್ದು ಅಭಿಮನ್ಯು ಈಶ್ವರನ್‌ ಅವರಿಗೆ ತಂಡ ಕೂಡಿಕೊಳ್ಳಲು ಬುಲಾವ್ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ. ಆರಂಭಿಕ ಆಟಗಾರನಾಗಿರುವ ಅಭಿಮನ್ಯು ಈಶ್ವರನ್‌, ಭಾರತ ‘ಎ‘ ಸರಣಿಯಲ್ಲಿ ಸತತ ಎರಡು ಶತಕ ಸಿಡಿಸಿದ್ದಾರೆ. ಎರಡನೇ ಭಾರತ  ‘ಎ‘ ಟೆಸ್ಟ್ ಪಂದ್ಯ ಮುಕ್ತಾಯವಾಗುತ್ತಿದ್ದಂತೆಯೇ ಅಭಿಮನ್ಯು ಈಶ್ವರನ್‌, ಭಾರತ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಬಾಂಗ್ಲಾದೇಶ ಎದುರಿನ ಟೆಸ್ಟ್‌ ಸರಣಿಗೂ ಮುನ್ನ ಟೀಂ ಇಂಡಿಯಾ ಗಾಯದ ಭೀತಿಗೆ ಸಿಲುಕಿದೆ. ಕೆಲ ಆಟಗಾರರು ಗಾಯದ ಸುಳಿಗೆ ಸಿಲುಕಿರುವುದು ಟೀಂ ಇಂಡಿಯಾದ ತಲೆನೋವು ಹೆಚ್ಚುವಂತೆ ಮಾಡಿದೆ. ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೇರಲು ಬಾಂಗ್ಲಾದೇಶ ಎದುರು ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಟೀಂ ಇಂಡಿಯಾಗೆ ಅನಿವಾರ್ಯ ಎನಿಸಿಕೊಂಡಿದೆ. ಇನ್ನು ಎರಡನೇ ಏಕದಿನ ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್, ಬಾಂಗ್ಲಾದೇಶ ಎದುರಿನ ಮೂರನೇ ಏಕದಿನ ಪಂದ್ಯ ಹಾಗೂ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ ಎಂದು ಹೇಳಿದ್ದಾರೆ. ಒಂದು ವೇಳೆ ರೋಹಿತ್ ಶರ್ಮಾ, ಟೆಸ್ಟ್ ಸರಣಿಯಿಂದ ಹೊರಗುಳಿದರೆ ಕೆ ಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದ್ದು, ರಾಹುಲ್‌ ಜತೆಗೆ ಶುಭ್‌ಮನ್ ಗಿಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.  

Continue Reading

Rohit Sharma.. ಭಾರತ ತಂಡಕ್ಕೆ ಬಿಗ್ ಶಾಕ್..! ಆಸ್ಪತ್ರೆಗೆ ದಾಖಲಾದ ರೋಹಿತ್ ಶರ್ಮಾ

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇನ್ನು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕ್ಷೇತ್ರ ರಕ್ಷಣೆ ಮಾಡುತ್ತಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕ್ಯಾಚ್ ಹಿಡಿಯುವ ಯತ್ನದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದು ಮೈದಾನ ತೊರೆದಿದ್ದಾರೆ. ಇದೀಗ ಗಾಯದ ತೀವ್ರತೆ ಅರಿಯಲು ಎಕ್ಸ್‌-ರೇ ಮಾಡಿಸಲು ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಉಪನಾಯಕ […]

Continue Reading

ಭಾರತ-ಬಾಂಗ್ಲಾದೇಶ ಪಂದ್ಯಕ್ಕೆ ಕ್ಷಣಗಣನೆ: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಟೀಂ ಇಂಡಿಯಾ

ಮೊದಲ ಏಕದಿನದಲ್ಲಿ ಹೀನಾಯ ಸೋಲು ಅನುಭವಿಸಿದ ಭಾರತ, ಬಾಂಗ್ಲಾದೇಶ ವಿರುದ್ಧ ಬುಧವಾರ 2ನೇ ಏಕದಿನ ಪಂದ್ಯವನ್ನಾಡಲಿದ್ದು ಸರಣಿ ಸೋಲಿನಿಂದ ಪಾರಾಗಬೇಕಾದ ಒತ್ತಡದಲ್ಲಿದೆ. ಭಾರತ 2015ರಲ್ಲಿ ಕೊನೆ ಬಾರಿ ಪ್ರವಾಸ ಕೈಗೊಂಡಾಗ ಏಕದಿನ ಸರಣಿಯನ್ನು 2-1ರಲ್ಲಿ ಗೆದ್ದಿದ್ದ ಬಾಂಗ್ಲಾ, ತವರಿನಲ್ಲಿ ಭಾರತ ವಿರುದ್ಧ ಸತತ 2ನೇ ಸರಣಿ ಗೆಲುವು ಸಾಧಿಸುವ ತವಕದಲ್ಲಿದೆ. ಮೊದಲ ಪಂದ್ಯದಲ್ಲಿ ಭಾರತ ನಾಲ್ವರು ಆಲ್ರೌಂಡರ್‌ಗಳೊಂದಿಗೆ ಕಣಕ್ಕಿಳಿದಿತ್ತು. ಬಹುತೇಕರು ಉತ್ತಮ ಬೌಲಿಂಗ್‌ ನಡೆಸಿದ್ದರು. ಬ್ಯಾಟಿಂಗ್‌ನಲ್ಲಿ ಮೂವರೂ ಒಂದಂಕಿ ಮೊತ್ತಕ್ಕೆ ಔಟಾಗಿದ್ದರು. ಒಂದು ಫಲಿತಾಂಶದಿಂದ ತಂಡದ ಸಂಯೋಜನೆಯ […]

Continue Reading

ಪ್ರೊ ಕಬಡ್ಡಿ ಲೀಗ್: ಪ್ಲೇ ಆಫ್ ಹಂತಕ್ಕೆ ಲಗ್ಗೆ ಇಟ್ಟ ಬೆಂಗಳೂರು ಬುಲ್ಸ್

ಪ್ರೊ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯಲ್ಲಿ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ತಂಡ ಪ್ಲೇ ಆಫ್‌ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಯುಪಿ ಯೋಧಾಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡ ಮೂರು ಅಂಕಗಳ ರೋಚಕ ಗೆಲುವು ಸಾಧಿಸುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆದುಕೊಂಡಿತು. ಬೆಂಗಳೂರು ಪಾಲಿಗೆ ಪ್ರಮುಖವಾಗಿದ್ದ ಪಂದ್ಯದಲ್ಲಿ ಬುಲ್ಸ್‌ ಟೀಮ್‌ 38-35 ಅಂತರದಿಂದ ಯುಪಿ ಯೋಧಾಸ್‌ ತಂಡವನ್ನು ಸೋಲಿಸಿತು. ಆಡಿದ 20 ಪಂದ್ಯಗಳಿಂದ 12 ಗೆಲುವು ಸಾಧಿಸಿ ಒಟ್ಟು 68 ಅಂಕ ಸಂಪಾದನೆ […]

Continue Reading

ಕೊಹ್ಲಿ ವರ್ಸಸ್ ರೋಹಿತ್ ಚರ್ಚೆ: ಇಬ್ಬರ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ರವಿಶಾಸ್ತ್ರಿ

ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ಎದುರು ಹೀನಾಯ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿತ್ತು. ಇದರ ಬೆನ್ನಲ್ಲೇ ಟೀಂ ಇಂಡಿಯಾ ನಾಯಕತ್ವದಲ್ಲಿ ಬದಲಾವಣೆಗಳನ್ನು ತರಬೇಕು ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿದ್ದವು. ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಐಪಿಎಲ್‌ನ ಯಶಸ್ವಿ ನಾಯಕ ಎನಿಸಿಕೊಂಡಿರುವ […]

Continue Reading

ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಸೋಲಿಗೆ ಈ ಅಂಶಗಳೇ ಕಾರಣ..!

ಅಂತಿಮ ವಿಕೆಟ್‌ಗೆ ಮಹದಿ ಹಸನ್ ಹಾಗೂ ಮಸ್ತಾಫಿಜುರ್ ರಹೆಮಾನ್ ಹೋರಾಟಕ್ಕೆ ಟೀಂ ಇಂಡಿಯಾ ತಲೆಬಾಗಿದೆ. ಒಂದು ವಿಕೆಟ್ ಕಬಳಿಸಲು ಪರದಾಡಿದ ಟೀಂ ಇಂಡಿಯಾ ಪಂದ್ಯವನ್ನೇ ಕೈಚೆಲ್ಲಿದೆ. ಆರಂಭದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬಳಿಕ ಬೌಲಿಂಗ್‌ನಲ್ಲಿ ಉತ್ತಮ ಹೋರಾಟ ನೀಡುವ ಮೂಲಕ ಕಮ್‌ಬ್ಯಾಕ್ ಮಾಡಿತು. ಆದರೆ ಟೀಂ ಇಂಡಿಯಾ ಒಂದು ವಿಕೆಟ್ ಕಬಳಿಸಲು ಸಾಧ್ಯವಾಗದೆ ಪಂದ್ಯ ಕೈಚೆಲ್ಲಿತು. ಮೆಹದಿ ಹಸನ್ ಅಜೇಯ 38 ರನ್ ಸಿಡಿಸುವ ಮೂಲಕ ಇನ್ನು ಒಂದು ಎಸೆತ ಬಾಕಿ ಇರುವಂತೆ […]

Continue Reading

Ind vs Ban.. ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಪಂದ್ಯಕ್ಕೆ ಇಲ್ಲಿ  ಬಾಂಗ್ಲಾ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಬಾಂಗ್ಲಾದೇಶ ತಂಡವನ್ನು ಮುನ್ನಡೆಸುತ್ತಿರುವ ಲಿಟನ್ ದಾಸ್ ಐವರು ಬ್ಯಾಟರ್‌ಗಳು ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ.  ಇನ್ನು ಭಾರತ ತಂಡದ ಪರ ಯುವ ವೇಗಿ ಕುಲ್ದೀಪ್ ಸೆನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ […]

Continue Reading

Ind vs Ban.. ಇಂದಿನಿಂದ ಏಕದಿನ ವಿಶ್ವಕಪ್ ಟೂರ್ನಿಗೆ ಸಿದ್ದತೆ ಆರಂಭಿಸಿರುವ ಟೀಂ ಇಂಡಿಯಾ

ಮಳೆ ಕಾಟದ ಕ್ರಿಕೆಟ್‌ ಸರಣಿಯಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲಿನ ಬಳಿಕ ಇಂದಿನಿಂದ ಆರಂಭವಾಗುವ 3 ಪಂದ್ಯಗಳ ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ-ಬಾಂಗ್ಲಾದೇಶ ಪರಸ್ಪರ ಸೆಣಸಾಡಲಿವೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್​ ಕೊಹ್ಲಿ, ಕೆಎಲ್​ ರಾಹುಲ್​ ತಂಡಕ್ಕೆ ವಾಪಸ್​ ಆಗಿದ್ದು, ಬಲ ಹೆಚ್ಚಿಸಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್​ಗೆ ಪೂರ್ವಭಾವಿಯಾಗಿ ಆಟಗಾರರಿಗೆ ಹೊಣೆಗಾರಿಕೆ ಮತ್ತು ಆಯಾ ಕ್ರಮಾಂಕಕ್ಕೆ ಬಲ ನೀಡಲು ಸಜ್ಜು ಮಾಡಲಾಗುತ್ತಿದೆ. ಬ್ಯಾಟಿಂಗ್​ಗೆ ನೆರವಾಗಲಿರುವ ಢಾಕಾದ ಶೇರ್​ ಎ ಬಾಂಗ್ಲಾ ಕ್ರೀಡಾಂಗಣದಲ್ಲಿ ರನ್​ […]

Continue Reading

Mohammed shami.. ಬಾಂಗ್ಲಾದೇಶ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದ ಮೊಹಮ್ಮದ್ ಶಮಿ

ಭುಜದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ, ಇಂದಿನಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ಬಾಂಗ್ಲಾದೇಶ ಎದುರಿನ ಏಕದಿನ ಸರಣಿಗೆ ಯುವ ಮಾರಕ ವೇಗಿ ಉಮ್ರಾನ್ ಮಲಿಕ್, ಭಾರತ ಏಕದಿನ ಕ್ರಿಕೆಟ್ ತಂಡ ಕೂಡಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಕಳೆದ ತಿಂಗಳು ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊಹಮ್ಮದ್ ಶಮಿ, ಟೀಂ ಇಂಡಿಯಾ ವೇಗದ ಬೌಲಿಂಗ್ ಪಡೆಯನ್ನು ಮುನ್ನಡೆಸಿದ್ದರು. ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್‌ನಲ್ಲಿ ಮುಗ್ಗರಿಸಿ ನಿರಾಸೆ […]

Continue Reading