Browsing: Uncategorized

ಬೆಂಗಳೂರು:  ಸಿದ್ದರಾಮಯ್ಯ (Siddaramaiah)ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್‌ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಿದ್ದು, ನಾಳೆ ಅಂದರೆ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಎಂದು ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ (Thaawarchand Gehlot) ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸಿಎಲ್‌ಪಿ…

ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ…

ಬೆಂಗಳೂರು:  ಕೊಲೆ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಒಳಗಾದ ಅಪರಾಧಿಗೆ 9 ವರ್ಷದಿಂದ ಪ್ರೀತಿಸುತ್ತಿರುವ ಯುವತಿಯನ್ನು ವರಿಸಲು 15 ದಿನ ಪೆರೋಲ್‌ ನೀಡಿದ್ದ ಹೈಕೋರ್ಟ್‌, ಇದೀಗ ಜ್ಯೋತಿಷಿಗಳ…

ಬೆಂಗಳೂರು: ಕರ್ನಾಟಕ ಸಿಎಂ ಫೈಟ್‌ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.…

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections 2023) ಹಿನ್ನೆಲೆ ಜಾರಿಯಾಗಿದ್ದ ನೀತಿ ಸಂಹಿತೆ(Code of Conduct) ಮುಗಿಯುತ್ತಿದ್ದಂತೆ ಅಧಿಕಾರಿಗಳಿಗೆ ಬಿಬಿಎಂಪಿ(BBMP) ಚಾಟಿ ಬೀಸಿದೆ. ಹೀಗಾಗಿ ಈಗ ಅಕ್ರಮವಾಗಿ ಎ ಖಾತ ಮಾಡಿ ಕೊಟ್ಟ ಅಧಿಕಾರಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಮಾರ್ಚ್ 29ರಂದು ಜಾರಿಯಾದ ನೀತಿ ಸಂಹಿತೆ ಮೇ 16ರಂದು ಮುಗಿಯುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ತಮ್ಮ ರೆಗ್ಯುಲರ್ ಕೆಲಸಗಳಿಗೆ ಮರಳಿದ್ದಾರೆ. ಸದ್ಯ ಅಕ್ರಮವಾಗಿ ಎ ಖಾತಗಳ ವಿಚಾರದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್(Tushar Girinath) ಮುಂದಾಗಿದ್ದಾರೆ. ಕಳೆದ ಎರಡು ತಿಂಗಳಲ್ಲಿ ದಾಖಲಾದ ಬಿ ಖಾತ ಟೂ ಎ ಖಾತ ಆಸ್ತಿಗಳ ಬಗ್ಗೆ ವಿವರಣೆ ಕೇಳಿ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಬೊಮ್ಮನಹಳ್ಳಿ, ಮಹಾದೇವಪುರ, ಯಲಹಂಕ, ಆರ್​ಆರ್ ನಗರ, ದಾಸರಹಳ್ಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಎ ಖಾತೆಗಳು ದಾಖಲಾಗಿವೆ. ಅಧಿಕಾರಿಗಳು ಎರಡು ತಿಂಗಳಲ್ಲಿ ಬೊಮ್ಮನಹಳ್ಳಿ ವಲಯದಲ್ಲಿ ಬರೋಬರಿ 600ಕ್ಕೂ ಹೆಚ್ಚಿನ ಬಿ ಖಾತ ಆಸ್ತಿಗಳನ್ನು ಎ ಖಾತಗೆ ವರ್ಗಾವಣೆ ಮಾಡಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಯಾವುದೇ ಫೀಸ್ ಪಡೆಯದೆ. ಬಿ ಖಾತ ಟೂ ಎ ಖಾತ ಮಾಡಲಾಗಿದೆ. ಹೀಗಾಗಿ ಜೆಸಿ ಜಯರಾಮ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಅಕ್ರಮವಾಗಿ ಮಾಡಿರುವ ಖಾತಗಳ ಬಗ್ಗೆ ಸಮಿತಿ ವರದಿ ನೀಡಲಿದೆ. ಸಮಿತಿಗೆ ಈಗಾಗಲೇ ಡೆಡ್ ಲೈನ್ ನೀಡಲಾಗಿದೆ. ನಿನ್ನೆ(ಮೇ 16) ಸಭೆ ನಡೆಸಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ನಗರದ ಹೊರ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಎ ಖಾತ ಆಗಿರುವ ಮಾಹಿತಿ ಬಂದಿದೆ. ಈ ತಿಂಗಳಲ್ಲಿ ಅಧಿಕಾರಿಗಳಲ್ಲಿ ಈ ಬಗ್ಗೆ ಸ್ವಯಂ ಮಾಹಿತಿ ನೀಡಿ ಸರಿ ಮಾಡಿಕೊಡುವಂತೆ ಆದೇಶಿಸಲಾಗಿದೆ. ಇಲ್ಲ ಅಂದ್ರೆ ತನಿಖೆ ಆದಾಗ ಶಿಕ್ಷೆ ಅನುಭವಿಸಬೇಕಾಗುತ್ತೆ. ಅಧಿಕಾರಿಗಳು ಶಾಮೀಲ್ ಆಗದಿದ್ರೆ ಇದು ಆಗಲು ಸಾಧ್ಯವಿಲ್ಲ. ತನಿಖೆಯಲ್ಲಿ ಯಾವ ಅಧಿಕಾರಿಗಳು ಶಾಮಿಲಾಗಿದ್ದಾರೆ, ಯಾವ ವಲಯಗಳಲ್ಲಿ ಎಷ್ಟು ಅಕ್ರಮ ಖಾತೆ ಮಾಡಿಕೊಡಲಾಗಿದೆ ಎಲ್ಲವು ಬೆಳಕಿಗೆ ಬರಲಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತಗೆದುಕೊಳ್ಳುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಯಾರಾಗುತ್ತಾರೆ ಅನ್ನೋ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಡಿ. ಕೆ. ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ದಿಗ್ವಿಜಯ ಸಾಧಿಸಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿ…

ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿರುವುದನ್ನು ಮನಗಂಡ ಪಾಲಿಕೆ ಈ ಬಗ್ಗೆ ಒಂದು ನಿರ್ಧಾರಕ್ಕೆ ಬಂದಿದೆ. ಪಾಠ ಮಾಡಲು ಬೇಕಾದ ಅರ್ಹತೆಯಿಲ್ಲದ 200ಕ್ಕೂ ಹೆಚ್ಚು ಹೊರ…

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ (AICC) ಅಧಿಕೃತವಾಗಿ ತಿಳಿಸಿದೆ. ಇದೀಗ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬೆಳಗಾವಿ ಕಾಂಗ್ರೆಸ್‌ ಶಾಸಕರು ಲಾಭಿ ನಡೆಸಿದ್ದಾರೆ. ಬೆಂಗಳೂರಲ್ಲೇ ಬೀಡು ಬಿಟ್ಟಿರುವ ಬೆಳಗಾವಿ ಕಾಂಗ್ರೆಸ್‌ ನಾಯಕರು ಸಚಿವ ಸ್ಥಾನ ಪಡೆದೇ ಬೆಳಗಾವಿಗೆ ಹೋಗೋಣವೆಂದು ಕಸರತ್ತು ನಡೆಸಿದ್ದಾರೆ. ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು, ಈ ಪೈಕಿ ಸತೀಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಕಾಶ್ ಹುಕ್ಕೇರಿ ಅಥವಾ ಗಣೇಶ್ ಹುಕ್ಕೇರಿ, ಅಶೋಕ್ ಪಟ್ಟಣ್, ಮಹಾಂತೇಶ ಕೌಜಲಗಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ ಬಿಜೆಪಿ ಭದ್ರಕೋಟೆಯಾಗಿದ್ದ ಬೆಳಗಾವಿಯಲ್ಲಿ ಈಗ ಕಾಂಗ್ರೆಸ್ ಪಾರುಪತ್ಯ ಶುರುವಾಗಿದೆ. ಇನ್ನು ಸಿದ್ದರಾಮಯ್ಯ ಶಿಷ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ ಎನ್ನಲಾಗಿದೆ. ಆದ್ರೆ, ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಬೆಳಗಾವಿಯಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಲಿಂಗಾಯತ 7, ಎಸ್ಸಿ 1, ಬ್ರಾಹ್ಮಣ1, ಎಸ್ಟಿ 1, ಮುಸ್ಲಿಂ 1 ಸೇರಿ 11 ಕೈ ಶಾಸಕರು, ಇಬ್ಬರು ಎಂಎಲ್‌ಸಿಗಳು ಇದ್ದು, ಲಿಂಗಾಯತ ನಾಯಕರ ಮಧ್ಯೆಯೇ ಸಚಿವರಾಗಲು ಹೆಚ್ಚಿನ ಪೈಪೋಟಿ ನಡೆಯುತ್ತಿದೆ. ಐವರು ಲಿಂಗಾಯತ ಶಾಸಕರ ಮಧ್ಯೆ ಸಚಿವ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಐವರು ಲಿಂಗಾಯತ ಶಾಸಕರ ಮಧ್ಯೆ ಸಚಿವ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಶುರುವಾಗಿದೆ. ಹೌದು ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ್ ಸವದಿ, ಪ್ರಕಾಶ್ ಹುಕ್ಕೇರಿ, ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ್ ಮಧ್ಯೆ ಸಚಿವ ಸ್ಥಾನಕ್ಕೆ ಫೈಟ್ ಶುರುವಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ ಅಥಣಿ ಜೊತೆ ಕಾಗವಾಡ, ಕುಡಚಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿರುವ ಲಕ್ಷ್ಮಣ್ ಸವದಿ ಪ್ರಬಲ ಹುದ್ದೆ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿಗೆ ಸೆಡ್ಡು ಹೊಡೆದು ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಜಯ ಸಾಧಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ಕೋಟಾದಡಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಜೊತೆಗೆ ಸತತ ಮೂರು ಬಾರಿ ಚಿಕ್ಕೋಡಿಯಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಂಎಲ್‌ಸಿ ಪ್ರಕಾಶ್​ ಹುಕ್ಕೇರಿ ತಮಗೆ ಇಲ್ಲವೇ, ತಮ್ಮ ಮಗ ಗಣೇಶ್ ಹುಕ್ಕೇರಿಗೆ ಸಚಿವ ಸ್ಥಾನ ನೀಡಲು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಮನವಿ ಕೂಡ ಮಾಡಿದ್ದಾರೆ. ಇನ್ನು 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ತ್ಯಜಿಸಿ ಲೋಕಸಭೆಗೆ ಸ್ಪರ್ಧಿಸಿದ್ದರು. ಹೀಗಾಗಿ ಈ ಬಾರಿ ತಮಗೆ ಇಲ್ಲ ತಮ್ಮ ಮಗನಿಗೆ ಸಚಿವ ಸ್ಥಾನ ನೀಡಲು ಪ್ರಕಾಶ್ ಹುಕ್ಕೇರಿ ಬೇಡಿಕೆ ಇಟ್ಟಿದ್ದಾರೆ. ಮತ್ತೊಂದೆಡೆ ಮೂರನೇ ಬಾರಿ ಶಾಸಕರಾಗಿರುವ ರಾಮದುರ್ಗ ಕಾಂಗ್ರೆಸ್ ಶಾಸಕ ಹಾಗೂ ಸಿದ್ದರಾಮಯ್ಯ ಆಪ್ತ ಅಶೋಕ್ ಪಟ್ಟಣ್ ಬೈಲಹೊಂಗಲ ಕಾಂಗ್ರೆಸ್‌ ಶಾಸಕ ಮಹಾಂತೇಶ ಕೌಜಲಗಿ ಸಹ ಸಚಿವ ಸ್ಥಾನದ ರೇಸ್‌ನಲ್ಲಿದ್ದಾರೆ. ಈ ನಡುವೆ ಬೆಳಗಾವಿ ಜಿಲ್ಲೆಗೆ ಕನಿಷ್ಠ ‌ಮೂರು ಮಂತ್ರಿ ಸ್ಥಾನ ಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೇಳಿದ್ದಾರೆ. ಒಟ್ಟಿನಲ್ಲಿ ಐವರು ಲಿಂಗಾಯತ ಶಾಸಕರ ಪೈಕಿ ಯಾರಿಗೆ ಸಿಗುತ್ತೆ ಮಂತ್ರಿ ಭಾಗ್ಯ ಕಾದುನೋಡಬೇಕಿದೆ.

ಇಡೀ ದೇಶದ ಕುತೂಹಲ ಕೆರಳಿಸಿದ್ದ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕಡೆಗೂ ಉತ್ತರ ಸಿಕ್ಕಿದೆ. ಎಲ್ಲರ ನಿರೀಕ್ಷೆಯಂತೆ, ಬಹುತೇಕರ ಅಪೇಕ್ಷೆಯಂತೆ ಸಿದ್ದರಾಮಯ್ಯನವರೇ 2ನೇ ಅವಧಿಗೆ…