Browsing: Uncategorized

ಬೆಂಗಳೂರು: ಜೆಡಿಎಸ್ ಕಾಂಗ್ರೆಸ್‌ನ ‘ಬಿ’ ಟೀಂ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಪದ್ಮನಾಭ ನಗರದ…

ಬೆಂಗಳೂರು: ನಿಮಗೆ ತಾಕತ್‌ ಇದ್ರೆ ಭಜರಂಗದಳ (Bajrang Dal) ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್‌ (Congress) ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಸವಾಲು…

ಬೆಂಗಳೂರು: ಉಚಿತ ಭರವಸೆ ಮೂಲಕ ಬಿಜೆಪಿ ರಾಜ್ಯದ ಜನರ ಕಿವಿಗೆ ಹೂ ಇಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ. ಈ ಸಂಬಂಧ ಶಿವಾನಂದ ವೃತ್ತದ ಬಳಿ ಮಾತನಾಡಿದ…

ಬೆಂಗಳೂರು: ಅತ್ಯಾಚಾರ ಮಾಡಿದವನನ್ನೇ ಮದುವೆಯಾಗುತ್ತೇನೆಂದು ಸಂತ್ರಸ್ತೆ ಹೇಳಿಕೆ ನೀಡಿದ ಹಿನ್ನೆಲೆ ಆರೋಪಿಗೆ ಬೆಂಗಳೂರಿನ ಹೈಕೋರ್ಟ್ (High Court) ಜಾಮೀನು ಮಂಜೂರು ಮಾಡಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ…

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ(Bangalore Traffic) ಇಂದು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ವಿವಿಐಪಿ ಭೇಟಿ ಇರುವ ಹಿನ್ನಲೆಯಲ್ಲಿ ಮಧ್ಯಾಹ್ನ 3 ರಿಂದ 7 ಗಂಟೆಯವರೆಗೆ ಕೆಲವು ರಸ್ತೆಗಳಲ್ಲಿ ಪ್ರಯಾಣ…

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆಯಾಗಿದೆ  (Bengaluru Rain). ಬೆಳಗ್ಗೆ ನಗರದ ಹಲವೆಡೆ ಮೋಡಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಸುಡು ಬಿಸಿಲು ಆರಂಭವಾಗಿದ್ದರೂ ಸಂಜೆ ಹೊತ್ತಿಗೆ ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಗೆ ನಗರದ ಹಲವು ರಸ್ತೆಗಳು ಕೆರೆಯಂತಾದವು. ವಾಹನ ಸವಾರರು ಸಂಚಾರಕ್ಕೆ ಪರದಾಟ ನಡೆಸಿದರು. ನಗರದ ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮೆಜೆಸ್ಟಿಕ್​, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ನಂದಿನಿ ಲೇಔಟ್​, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಬನಶಂಕರಿ, ಬಸವನಗುಡಿ, ಶ್ರೀನಗರ, ಗಿರಿನಗರ, ಹೆಬ್ಬಾಳ, ಆರ್.ಟಿ.ನಗರ, ಶಾಂತಿನಗರ, ಮತ್ತಿಕೆರೆ, ಮಲ್ಲೇಶ್ವರಂ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ನಗರದ ಕೆಲವೊಂದು ರಸ್ತೆಗಳು ನೀರು ತುಂಬಿ ಕೆರೆಯಂತಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಡಾಯಿತು. ದ್ವಿಚಕ್ರ ವಾಹನ ಸವಾರರು ರಸ್ತೆ ಬದಿ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು. ಇನ್ನೂ ಕೆಲವರು ಫ್ಲೈಓವರ್​, ಸ್ಕೈವಾಕ್​ಗಳಲ್ಲಿ ಆಶ್ರಯ ಪಡೆಯುವಂತಾಯಿತು. ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಒಂದು ಟೈಮ್​ನಲ್ಲಿ ಸಖತ್​ ಸುದ್ದಿಯಾಗಿದ್ದ ಯುವರಾಜ್ ಸ್ವಾಮಿ(Yuvaraj Swamy) ವಿರುದ್ಧ ಇದೀಗ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ. ಹೌದು ವಂಚನೆ ಕೇಸ್​ನಲ್ಲಿ ಜೈಲಿಗೆ ಹೋಗಿದ್ದ ಯುವರಾಜ್…

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ 8 ದಿನ ಮಾತ್ರ ಬಾಕಿಯಿದೆ. ಇದರ ನಡುವೆಯೇ ನಿನ್ನೆ ಅಷ್ಟೇ…

ಬೆಂಗಳೂರು: ಗುರುರಾಘವೇಂದ್ರ ಬ್ಯಾಂಕ್​ ಹಗರಣಕ್ಕೆ (Guru Raghavendra Bank Scam) ಸಂಬಂಧಿಸಿದಂತೆ  ಜಿ.ರಘುನಾಥ್​’ಗೆ ಬೆಂಗಳೂರಿನ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಭದ್ರತೆ ಇಲ್ಲದೆ 105 ಕೋಟಿ ರೂ. ಸಾಲ…

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ(Bangalore), ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ(Heavy Rain)ಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಕಾರವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಯಲಹಂಕದಲ್ಲಿ 7 ಸೆಂ.ಮೀ ಮಳೆಯಾಗಿದೆ. ಭಾಲ್ಕಿ, ಹುಮನಾಬಾದ್, ಕಲಬುರಗಿ, ಪೊನ್ನಂಪೇಟೆ, ತೊಂಡೇಭಾವಿ, ಗೌರಿಬಿದನೂರು, ರಾಯಚೂರು, ಗಂಗಾವತಿ, ಸಿರುಗುಪ್ಪ, ಬೆಂಗಳೂರು ನಗರ, ಜಿಕೆವಿಕೆ, ಭದ್ರಾವತಿ, ಕೂಡಲಸಂಗಮ, ಕಮಲಾಪುರ, ಗಂಗಾವತಿ, ಮುದಗಲ್, ಬೀದರ್, ಬೆಂಗಳೂರು ಕೆಐಎಎಲ್​ ವಿಮಾನ ನಿಲ್ದಾಣ, ಗೋಪಾಲನಗರ, ಚಿತ್ತಾಪುರ, ಮುನಿರಾಬಾದ್, ರೋಣ, ಸೈದಾಪುರ, ಯಡವಾಡ, ಔರಾದ್, ಕುರ್ಡಿ, ಉಚ್ಚಂಗಿದುರ್ಗ, ಚಿಕ್ಕಬಳ್ಳಾಪುರ, ಕುಡತಿನಿ, ಶಿಡ್ಲಘಟ್ಟ, ಸೋಮವಾರಪೇಟೆ, ಮೂರ್ನಾಡು, ವಿರಾಜಪೇಟೆ, ರಾಮನಗರ, ದೇವನಹಳ್ಳಿ, ಟಿ ನರಸೀಪುರ, ಮಧುಗಿರಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಡೀ ದಿನ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.