Browsing: Uncategorized

ಬೆಂಗಳೂರು:  ಚುನಾವಣಾ ಅಕ್ರಮಗಳನ್ನು ತಡೆಯಲು ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ತನಿಖಾ ಸಂಸ್ಥೆಗಳು 2.57 ಕೋಟಿ ರು. ನಗದನ್ನು ಜಪ್ತಿ ಮಾಡಿವೆ. ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ 93.50 ಲಕ್ಷ ರು. ನಗದು, ಗೋಕಾಕ್‌ ವಿಧಾನಸಭಾ ಕ್ಷೇತ್ರದಲ್ಲಿ 50 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿ 25.74 ಲಕ್ಷ ರು. ಮೌಲ್ಯದ 50.461 ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 102.90 ಕೋಟಿ ರು. ನಗದು, 22.12 ಕೋಟಿ ರು. ಮೌಲ್ಯದ ಉಚಿತ ಕೊಡುಗೆಗಳನ್ನು ಜಪ್ತಿ ಮಾಡಲಾಗಿದೆ. 68.69 ಕೋಟಿ ರು. ಮೌಲ್ಯದ 18.16 ಲಕ್ಷ ಲೀಟರ್‌ ಮದ್ಯ, 80.44 ಕೋಟಿ ರು. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 292.06 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ 5.88 ಕೋಟಿ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳ ಲಾಗಿತ್ತು. ಈ ಬಾರಿ ಮೂರುಪಟ್ಟು ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.2,226 ಎಫ್‌ಐಆರ್‌, 69,805 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿ ಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಿಗೆ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 5,329 ಪ್ರಕರಣಗಳನ್ನು ದಾಖಲಿಸಲಾಗಿದೆ. 9,569 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 14,885 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ ಎಂದಿದೆ.

ಬೀದರ್: ದೇಶದಲ್ಲೇ ಕರ್ನಾಟಕ ನಂಬರ್‌ 1 ಆಗಲು ಡಬಲ್‌ ಎಂಜಿನ್‌ ಸರ್ಕಾರ ಬರಬೇಕು ಎಂದು ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಈ ಬಾರಿಯ ನಿರ್ಧಾರ,…

ಬೆಳಗಾವಿಯಲ್ಲಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ಪ್ರಚಾರ, ರೋಡ್ ಶೋ, ಸಭೆಗಳನ್ನು ನಡೆಸುತ್ತಿದ್ದಾರೆ. ಇಂದು ಬೆಳಗಾವಿಗೆ ಆಗಮಿಸುವ…

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನರೇಂದ್ರ ಮೋದಿ ರೋಡ್‌ ಶೋಗೆ ಆಗಮಿಸಲಿದ್ದಾರೆ ಎಂದು ರಸ್ತೆಯನ್ನು ಬಂದ್‌ ಮಾಡಲಾಗಿದ್ದು, ತಾಳಿ ಕಟ್ಟಲು ಹೋಗುತ್ತಿದ್ದ ಮದುಮಗನ್ನು ಕಲ್ಯಾಣ ಮಂಟಪಕ್ಕೆ…

ಬೆಂಗಳೂರು: ಮುಸ್ಲಿಂ ಸಮುದಾಯ ಸಿದ್ದರಾಮಯ್ಯ ಸಿಎಂ ಆಗಲು ಬಯಸುತ್ತೆ ಎಂದು ಶಾಸಕ ಜಮೀರ್ ಅಹಮದ್ ಖಾನ್(Zameer Khan) ಹೇಳಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿಯಲ್ಲಿ(Madanayakanahalli) ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಿ…

ಬೆಂಗಳೂರು: ಸೋನಿಯಾ ಗಾಂಧಿ ಅವರು ವಿಷಕನ್ಯೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹೇಳಿಕೆ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್…

ಬೆಂಗಳೂರು: ಗೀತಾ ಅವರು ಬಂಗಾರಪ್ಪನವರ ಮಗಳು ಹೀಗಾಗಿ ಕಾಂಗ್ರೆಸ್ ಸೇರಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ (Minister Ashok) ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ…

ಬೆಂಗಳೂರು: ದಿನನಿತ್ಯ ಓಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದೆ ಕಾಲು ಜಾರಿ ಹಿಂದಕ್ಕೆ ಬೀಳಲು ಆಗಿದ್ದೆ. ಗಾಬರಿ ಪಡುವಂತಹದ್ದೇನಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಿಎಂ…

ಕೆ ಆರ್ ಪುರ : ಬೆಂಗಳೂರಿನ ಕೆಆರ್ ಪುರದ ಕೇಂಬ್ರಿಡ್ಜ್ ವಿದ್ಯಾಸಂಸ್ಥೆಯಲ್ಲಿ ರೆಫ್ರಲ್ ಲ್ಯಾಬ್ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದ್ದು , ಕಾಲೇಜಿನ ವಿದ್ಯಾರ್ಥಿಗಳು , ಪೋಷಕರು…

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ಬೆಂಗಳೂರಿನಲ್ಲಿ(Bangalore) ರೋಡ್ ಶೋ ನಡೆಸುವ ಹಿನ್ನೆಲೆ, ನಗರದ ಹಲವೆಡೆ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ…