Browsing: ಅಂತರಾಷ್ಟ್ರೀಯ

ಲಂಡನ್: ಭಾರತದ ಪ್ರಖ್ಯಾತ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ (Harish Salve) ಅವರು ತಮ್ಮ 68ನೇ ವಯಸ್ಸಿನಲ್ಲಿ 3ನೇ ಮದುವೆಯಾದ್ದಾರೆ. ಹೌದು. ಲಂಡನ್ ನಲ್ಲಿ (London)…

ಅಮೆರಿಕ: ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಪತ್ನಿ ಜಿಲ್ ಬೈಡನ್ (72) (Jill Biden) ಅವರಿಗೆ ಕೊರೊನಾ (Covid-19) ಸೋಂಕು ದೃಢಪಟ್ಟಿದೆ. ಅವರಿಗೆ ಸಾಮಾನ್ಯ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಶ್ವೇತಭವನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಅನಾರೋಗ್ಯದ ಹಿನ್ನಲೆ ಸೋಮವಾರ ಸಂಜೆ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಬಗ್ಗೆ ಅವರ ಮಾಧ್ಯಮ ಸಲಹೆಗಾರರಾದ ಎಲಿಜಬೆತ್ ಅಲೆಕ್ಸಾಂಡರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ ಜಿಲ್ ಬೈಡನ್ ಅವರು ಡೆಲವೇರ್‌ನ ರೆಹೋಬೋತ್ ಬೀಚ್‍ನಲ್ಲಿರುವ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಅವರಿಗೆ ಕಳೆದ ವರ್ಷ ಆಗಸ್ಟ್‌ನಲ್ಲೂ ಕೋವಿಡ್ ಸೋಂಕು ಪತ್ತೆಯಾಗಿತ್ತು.  ಜಿಲ್ ಬೈಡನ್‍ಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಅಧ್ಯಕ್ಷ ಬೈಡನ್ ಅವರಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ. ಪರೀಕ್ಷೆಯಲ್ಲಿ ಅಧ್ಯಕ್ಷರಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ. ಅಧ್ಯಕ್ಷರನ್ನು ಈ ವಾರ ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ. ಈ ವೇಳೆ ರೋಗಲಕ್ಷಣಗಳ ಮೇಲ್ವಿಚಾರಣೆ ಮಾಡಲಾಗುತ್ತದೆ. ಸದ್ಯ ಅವರು ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ (G20 Summit) ಭಾಗಿಯಾಗಲಿದ್ದಾರೆ. ಅದಕ್ಕಾಗಿ ಸೆ.7 ರಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಸೆ.8 ರಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, 9 ಹಾಗೂ 10 ರಂದು ನಡೆಯಲಿರುವ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೈಡನ್ ಅವರಿಗೆ 2022ರ ಜುಲೈನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು.

ಅಮೆರಿಕ: ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ (G 20 summit 2023) ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ (Xi Jinping) ಭಾಗವಹಿಸದಿರುವುದು ತೀವ್ರ ಬೇಸರ ತಂದಿದೆ ಎಂದು ಅಮೆರಿಕ…

ಬ್ರೆಜಿಲ್: ಮಗಳನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿರುವ ಆರೋಪದ ಮೇಲೆ ಬ್ರೆಜಿಲ್ ​ನಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ಸ್ಥಳೀಯ ಸುದ್ದಿ ವಾಹಿನಿ ನೀಡಿರುವ ಮಾಹಿತಿ ಪ್ರಕಾರ, 9 ವರ್ಷದ ಮಗಳನ್ನು ಹತ್ಯೆ ಮಾಡಿ…

ಸಿಂಗಾಪುರ: ಸಿಂಗಾಪುರದ (Singapore) ನೂತನ ಅಧ್ಯಕ್ಷರಾಗಿ (President) ಆಯ್ಕೆಯಾಗಿರುವ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ (Tharman Shanmugaratnam) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ…

ಪಾಕಿಸ್ತಾನದ ಖೈಬರ್ ಫಖ್ತುಂಖ್ವಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 11 ಮಂದಿ ಪಾಕ್ ಸೈನಿಕರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಮಾಲಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಗಳ ಬಳಿ ಮೋಟಾರುಬೈಕಿನಲ್ಲಿ ಬಂದಿದ್ದ ವ್ಯಕ್ತಿ ಆತ್ಮಾಹುತಿ ಬಾಂಬ್ ಸ್ಫೋಟಗೊಳಿಸಿದ್ದಾನೆ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಪಾಕಿಸ್ತಾನ ಟೆಲಿಗ್ರಾಫ್ ವರದಿ ಮಾಡಿದೆ. ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಜುಲೈ 30 ರಂದು, ರಾಜಕೀಯ ಪಕ್ಷದ ಸಭೆಯಲ್ಲಿ ಆತ್ಮಹತ್ಯಾ ಬಾಂಬರ್ ಸ್ಫೋಟಗೊಂಡು ಕನಿಷ್ಠ 54 ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 400 ಕ್ಕೂ ಹೆಚ್ಚು JUI-F ಸದಸ್ಯರು ಮತ್ತು ಬೆಂಬಲಿಗರು ಸಭೆಯಲ್ಲಿ ಭಾಗವಹಿಸಿದ್ದರು.ಇತ್ತೀಚೆಗಷ್ಟೇ ಆಗಸ್ಟ್ 13ರಂದು ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಚೀನಾದ ಇಂಜಿನಿಯರ್​ಗಳನ್ನು ಹೊತ್ತೊಯ್ಯುತ್ತಿದ್ದ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿತ್ತು. ಈ ದಾಳಿಯಲ್ಲಿ ನಾಲ್ವರು ಚೀನಾದ ನಾಗರಿಕರು ಮತ್ತು 9 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದರು.

ಮಾಸ್ಕೋ: ಚಂದ್ರನ (Moon) ಅಂಗಳಕ್ಕೆ ರಷ್ಯಾ (Russia) ಕಳುಹಿಸಿದ್ದ ಲೂನಾ-25 (Luna-25) ಮಿಷನ್‌ ವಿಫಲವಾಗಿ ಅಪ್ಪಳಿಸಿದ ಪರಿಣಾಮವಾಗಿ ಚಂದ್ರನ ಮೇಲ್ಮೈನಲ್ಲಿ ಕುಳಿಯಾಗಿದೆ ಎಂದು ಚಿತ್ರವೊಂದನ್ನು ಬಿಡುಗಡೆ ಮಾಡಿ ನಾಸಾ…

ಇಸ್ಲಾಮಾಬಾದ್: : ಪಾಕಿಸ್ತಾನ ಇತಿಹಾಸದಲ್ಲಿ ಇದೆ ಮೊದಲ ಭಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 300 ರೂ. ಗಡಿ ದಾಟಿದೆ. ನಿನ್ನೆ ಸಂಜೆ ಹೊಸ ಬೆಲೆ ಬಿಡುಗಡೆ ಮಾಡಿದ…

ಲಂಡನ್: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ರಿಪಬ್ಲಿಕನ್ ಪಕ್ಷದ ನಾಮನಿರ್ದೇಶನದಲ್ಲಿ ಗೆಲ್ಲದಿದ್ದರೆ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು ಎಂದು ಭಾರತೀಯ ಮೂಲದ ಅಮೆರಿಕದ ಸಂಸದ…

ಬ್ಯಾಂಕಾಕ್: ಮಗುವಿಗೆ ತಂದೆ ಮತ್ತು ತಾಯಿ ಇಬ್ಬರೂ ಬೇಕು ಎಂದು ನಮ್ಮ ಸಮಾಜ ನಂಬಿರುವುದರಿಂದ, ಒಂಟಿ ಅಪ್ಪಂದಿರು ಹೆಚ್ಚು ‘ತಾಯಿ’ಯಾಗಲು ಪ್ರಯತ್ನಿಸುತ್ತಾರೆ. ಹಾಗೆಯೇ ಒಂಟಿ ತಾಯಂದಿರು ತಮ್ಮ ಮಗುವಿಗೆ…